ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ : ಬಂಗಾರಪೇಟೆಯಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ; ಪ್ರತಿಭಟನೆ, ಆರೋಪಿ ಬಂಧನ

ಬಂಗಾರಪೇಟೆ : ಆರು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿ ನಗರದಲ್ಲಿ ಬುಧವಾರ ರಾತ್ರಿ ಮುಸ್ಲಿಂ ಸಮುದಾಯದವರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದು, ವ್ಯಕ್ತಿಯನ್ನು ಬಂಧಿಸಲಾಗಿದೆ. 37 ವರ್ಷದ ರಾಘವೇಂದ್ರ ಬಂಧಿತ ಆರೋಪಿ. ಈ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಾಲಕಿಯ ಪೋಷಕರು ಠಾಣೆಯಲ್ಲಿ ದೂರು ನೀಡಿದ್ದರು.

ಠಾಣೆ ಮುಂದೆ ಪ್ರತಿಭಟನಕಾರರು ಜಮಾಯಿಸಿ ಕ್ರಮಕ್ಕೆ ಪಟ್ಟು ಹಿಡಿದಿದ್ದರಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಸಿತ್ತು. ಬಾಲಕಿಯನ್ನು ತಪಾಸಣೆಗಾಗಿ ಕರೆದೊಯ್ಯುವ ಸಂದರ್ಭದಲ್ಲೂ ಸಾರ್ವಜನಿಕ ಆಸ್ಪತ್ರೆ ಮುಂದೆ ನೂರಾರು ಜನ ಸೇರಿದ್ದರು. ಸ್ಥಳಕ್ಕೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಭೇಟಿ ನೀಡಿ ಪ್ರತಿಭಟನಕಾರರನ್ನು ಸಮಾಧಾನಪಡಿಸಿದರು. ಎಸ್ಪಿ ಜೊತೆಗೆ ಚರ್ಚಿಸಿದರು. ಬಾಲಕಿಯ ಕುಟುಂಬದವರೊಂದಿಗೆ ಮಾತನಾಡಿದರು. ಬಳಿಕ ಮುಸ್ಲಿಮರು ಪ್ರತಿಭಟನೆ ಹಿಂಪಡೆದರು.

“ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಸಂಬಂಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, 37 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದೇವೆ. ತನಿಖೆ ನಡೆಸುತ್ತಿದ್ದೇವೆ. ಸದ್ಯ ಪರಿಸ್ಥಿತಿ ಶಾಂತವಾಗಿದೆ” ಎಂದು ಕೆಜಿಎಫ್ ಎಸ್ಪಿ ಶಿವಾಂಶು ರಜಪೂತ್ ತಿಳಿಸಿದರು.

Edited By :
PublicNext

PublicNext

03/09/2026 02:09 pm

Cinque Terre

11.65 K

Cinque Terre

0