ಶ್ರೀರಂಗಪಟ್ಟಣ: ಮಹಿಳಾ ಪಿಎಸ್‌ಐ ಸವಿತಾ ಅವರಿಗೆ ಕಪಾಳಮೋಕ್ಷ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸುರೇಶ್ ಗೌಡ ಅವರ ಪುತ್ರಿ ಐಶ್ವರ್ಯಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ.
ಶ್ರೀರಂಗಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯವು ಐಶ್ವರ್ಯಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಘಟನೆಗೆ ಸಂಬಂಧಿಸಿದಂತೆ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಐಶ್ವರ್ಯಾ ಕೂಡ ಮಹಿಳಾ ಪಿಎಸ್‌ಐ ಸವಿತಾ ವಿರುದ್ಧ ಪ್ರತಿದೂರು ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಡಿವೈಎಸ್‌ಪಿ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗಿತ್ತು.
ಈ ವಿಚಾರಣೆಯ ಬಳಿಕ ಇದೀಗ ಶ್ರೀರಂಗಪಟ್ಟಣ ಜೆಎಂಎಫ್‌ಸಿ ನ್ಯಾಯಾಲಯ ಐಶ್ವರ್ಯಾ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
Kshetra Samachara
03/09/2026 09:00 pm
LOADING...