ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಡಿಕೇರಿ : ಬಡವರ ಅಕ್ಕಿ ಬೇರೆಡೆಗೆ ಸಾಗಾಟ? 60ಕ್ಕೂ ಹೆಚ್ಚು ಮೂಟೆ ಪತ್ತೆ!

ಮಡಿಕೇರಿ : ವಾಹನ ತಪಾಸಣೆ ವೇಳೆ 25 ಕೆ.ಜಿ ತೂಕದ 60ಕ್ಕೂ ಹೆಚ್ಚು ಅಕ್ಕಿ ಮೂಟೆಗಳು ಪತ್ತೆಯಾಗಿದ್ದು, ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತೇ ಎಂಬ ಅನುಮಾನ ಮೂಡಿದೆ.

ಮಾಹಿತಿ ಪಡೆದ ಆಹಾರ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಕ್ಕಿ ಹಾಗೂ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಮೇಲ್ನೋಟಕ್ಕೆ ಪತ್ತೆಯಾದ ಅಕ್ಕಿ ಸೊಸೈಟಿಯಲ್ಲಿ ವಿತರಿಸುವ ಪಡಿತರ ಅಕ್ಕಿಯಂತೆ ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಡಿಕೇರಿಯ ಅಕ್ಕಿ ಮಿಲ್‌ನಿಂದ ಅಕ್ಕಿಯನ್ನು ಸಂಗ್ರಹಿಸಿ ಕೋಡ್ಲಿಪೇಟೆ ಕಡೆಗೆ ಸಾಗಿಸಲಾಗುತ್ತಿತ್ತು ಎನ್ನಲಾಗಿದ್ದು, ಅಕ್ಕಿಯ ಮೂಲ ಮತ್ತು ಸಾಗಾಟದ ಉದ್ದೇಶದ ಬಗ್ಗೆ ತನಿಖೆ ನಡೆಯುತ್ತಿದೆ.

ಪಡಿತರ ಅಕ್ಕಿ ಅಕ್ರಮವಾಗಿ ಮಾರಾಟವಾಗಿರುವುದು ದೃಢಪಟ್ಟರೆ ಸಂಬಂಧಪಟ್ಟವರ ರೇಷನ್ ಕಾರ್ಡ್‌ಗಳನ್ನು ರದ್ದುಪಡಿಸುವ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಇಲಾಖೆ ತಿಳಿಸಿದೆ.

Edited By :
PublicNext

PublicNext

04/09/2026 03:44 pm

Cinque Terre

2.82 K

Cinque Terre

0

ಸಂಬಂಧಿತ ಸುದ್ದಿ