ಕಾರಟಗಿ: ಕಾಂಗ್ರೆಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆಯುತ್ತಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ಶನಿವಾರ ಐದನೇ ದಿನಕ್ಕೆ ಕಾಲಿಟ್ಟಿದೆ. ಇಂದು ಕೊಪ್ಪಳ ಜಿಲ್ಲೆಯ ಕಾರಟಗಿಯಿಂದ ಪಾದಯಾತ್ರೆ ಆರಂಭವಾಗಿದ್ದು, ಪಾದಯಾತ್ರೆ ಆರಂಭಕ್ಕೂ ಮುನ್ನ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗಿದೆ. ಶಿಕ್ಷಕರ ದಿನಾಚರಣೆ ಪ್ರಯುಕ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ರವರು ಮಾಜಿ ಸಚಿವ ಬಿ.ಶ್ರೀರಾಮುಲು ನಿವೃತ್ತ ಶಿಕ್ಷಕರಿಗೆ ಸನ್ಮಾನ ಮಾಡಿದ್ದಾರೆ.
ಬಳಿಕ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು, ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನವನ್ನು ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಆಚರಿಸಲಾಗುತ್ತದೆ ಎಂದು ತಿಳಿಸಿದರು. ಶಿಕ್ಷಕರೆಂದರೆ ಕೇವಲ ಪಾಠ ಹೇಳಿ ಕೊಡುವವರಲ್ಲ; ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಮಹತ್ತರ ಕಾರ್ಯವನ್ನು ಅವರು ನಿರ್ವಹಿಸುತ್ತಾರೆ ಎಂದು ಹೇಳಿದರು.
ಮಕ್ಕಳ ವ್ಯಕ್ತಿತ್ವ ನಿರ್ಮಿಸುವಲ್ಲಿ ಅವರ ಪಾತ್ರ ಗಮನಾರ್ಹವಾದುದು. ಒಬ್ಬ ಒಳ್ಳೆಯ ಶಿಕ್ಷಕ ಒಂದು ಪೀಳಿಗೆಯನ್ನೇ ಬದಲಾಯಿಸಬಲ್ಲ ಎಂದು ತಿಳಿಸಿದರು. ಶಿಕ್ಷಕರು ರಾಷ್ಟ್ರ ನಿರ್ಮಾಣ ಕಾರ್ಯವನ್ನು ಮೌನವಾಗಿ ನೆರವೇರಿಸುತ್ತಾರೆ. ಆದ್ದರಿಂದ ಅವರನ್ನು ಗೌರವಿಸುವ ಕಾರ್ಯ ಸಮಾಜದಿಂದ- ನಮ್ಮಿಂದ ಆಗಬೇಕು ಎಂದು ಹೇಳಿದರು.
PublicNext
05/09/2026 12:12 pm
LOADING...