ಕೋಲಾರ : ಗ್ರಾಮೀಣ ಭಾಗದ ಪ್ರತಿಯೊಂದು ಮನೆಗೂ ಸರ್ಕಾರದ ಯೋಜನೆಗಳ ಮಾಹಿತಿ ತಲುಪುವುದು ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಸಕ್ರಿಯವಾಗಿ ಶ್ರಮಿಸಬೇಕು ಎಂದು ಅರಣ್ಯ, ಜೀವಿಶಾಸ್ತ್ರ, ಪರಿಸರ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಸೂಚನೆ ನೀಡಿದರು.
ನಗರದ ಸರ್ಕಾರಿ ಪದವಿ ಪೂರ್ವ ಜೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮದಲ್ಲಿ, ಕೋಲಾರ ತಾಲೂಕು ಮಾಹಿತಿ, ಶಿಕ್ಷಣ ಹಾಗೂ ಸಂವಹನ (IEC) ಘಟಕದ ವತಿಯಿಂದ ಸಿದ್ಧಪಡಿಸಲಾಗಿದ್ದ ‘VB-GRAM-G’ ಯೋಜನೆಯ ಜಾಗೃತಿ ಕರಪತ್ರವನ್ನು ಸಚಿವರು ಅಧಿಕೃತವಾಗಿ ಬಿಡುಗಡೆಗೊಳಿಸಿ ಮಾತನಾಡಿದರು.
ಕರಪತ್ರ ಬಿಡುಗಡೆ ಮಾಡಿ ಮಾತನಾಡಿದ ಸಚಿವರು, “ಸರ್ಕಾರ ಜಾರಿಗೆ ತರುವ ಗ್ರಾಮೀಣಾಭಿವೃದ್ಧಿ ಯೋಜನೆಗಳು ಕೇವಲ ಕಾಗದಕ್ಕಷ್ಟೇ ಸೀಮಿತವಾಗದೆ, ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು. ಈ VB-GRAM-G ಯೋಜನೆಯ ಕುರಿತು ತಾಲೂಕಿನ ಪ್ರತಿಯೊಂದು ಮನೆ-ಮನೆಗೂ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
Kshetra Samachara
05/09/2026 04:30 pm
LOADING...