ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಡ್ಯ : ಗ್ರಾಮೀಣ ಜನರಿಗೆ ಅನುಕೂಲ ಕಲ್ಪಿಸುವ ಡಿಜಿಪೇ ಮಾದರಿ ಕಾರ್ಯಾರಂಭ

ಮಂಡ್ಯ : ಗ್ರಾಮೀಣ ಭಾಗದ ಜನರಿಗೆ ಬ್ಯಾಂಕ್‌ಗೆ ತೆರಳಿ ಹಣ ಪಡೆಯಲು ಗಂಟೆಗಟ್ಟಲೆ ಕಾಯುವ ಅನಿವಾರ್ಯತೆಯನ್ನು ತಪ್ಪಿಸುವ ನಿಟ್ಟಿನಲ್ಲಿ ಡಿಜಿಪೇ ಮಾದರಿ ಕಾರ್ಯಾರಂಭಕ್ಕೆ ಚಾಲನೆ ನೀಡಲಾಯಿತು.

ಮಂಡ್ಯ ಜಿಲ್ಲೆಯ ಮದ್ದೂರು ಯೋಜನಾ ಕಚೇರಿ ವ್ಯಾಪ್ತಿಯ ಶಂಕರಪುರ ವಲಯದ ಚಾಮನಹಳ್ಳಿ ಕಾರ್ಯಕ್ಷೇತ್ರದಲ್ಲಿ ಹಣ ಸಂಗ್ರಹಣಾ ಕೇಂದ್ರದಲ್ಲಿ ಡಿಜಿಪೇ ಮಾದರಿ ಕಾರ್ಯಾರಂಭದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷೆ ಅಶ್ವಿನಿ ಹಾಗೂ ಯೋಜನಾಧಿಕಾರಿ ಹಾಲಪ್ಪ ಸೇರಿದಂತೆ ಯೋಜನೆಯ ಅಧಿಕಾರಿಗಳು, ವಲಯದ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ಹಾಲಪ್ಪ, ತಾಲೂಕು ವಿಚಕ್ಷಣಾಧಿಕಾರಿ ಚಂದ್ರಶೇಖರ್, ವಲಯದ ಮೇಲ್ವಿಚಾರಕ ಅರುಣ್ ಕುಮಾರ್, ಸಿಎಸ್‌ಸಿ ನೋಡಲ್ ಅಧಿಕಾರಿ ರಾಜೇಶ್ ಹಾಗೂ ವಲಯದ ಸೇವಾ ಪ್ರತಿನಿಧಿಗಳು ಭಾಗವಹಿಸಿದ್ದರು. ಒಟ್ಟು ಸುಮಾರು 20 ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Edited By :
Kshetra Samachara

Kshetra Samachara

05/09/2026 06:00 pm

Cinque Terre

460

Cinque Terre

0