ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಬಳ್ಳಾಪುರ : ಜನವಸತಿ ಪ್ರದೇಶದಲ್ಲೇ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ

ಬಾಗೇಪಲ್ಲಿ : ತಾಲ್ಲೂಕಿನ ಘಂಟಂವಾರಿಪಲ್ಲಿ ಗ್ರಾಮದಲ್ಲಿ ಹಾಡಹಗಲೇ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಜನವಸತಿ ಪ್ರದೇಶದಲ್ಲೇ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯನ್ನು ಹತ್ಯೆ ಮಾಡಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಕೊಲೆಯಾದ ವ್ಯಕ್ತಿಯನ್ನು ಬಾಗೇಪಲ್ಲಿ ನಿವಾಸಿ ನಾಗರಾಜ್ (50) ಎಂದು ಗುರುತಿಸಲಾಗಿದೆ. ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಈ ಕೃತ್ಯ ನಡೆದಿರುವುದಾಗಿ ತಿಳಿದುಬಂದಿದೆ.

ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ಅಧೀಕ್ಷಕಿ ಪದ್ಮಿನಿ ಸಾಹೊ, ಡಿವೈಎಸ್‌ಪಿ ಜಗನ್ನಾಥ್ ರೈ, ಇನ್ಸ್‌ಪೆಕ್ಟರ್ ಅಜಯ್ ಸಾರಥಿ ಹಾಗೂ ಸಬ್ ಇನ್ಸ್‌ಪೆಕ್ಟರ್ ಅನ್ಸರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನಾ ಸ್ಥಳದಲ್ಲಿ ಶ್ವಾನದಳ, ಬೆರಳಚ್ಚು ತಜ್ಞರು ಹಾಗೂ ಸೀನ್ ಆಫ್ ಕ್ರೈಂ ತಂಡ ಪರಿಶೀಲನೆ ನಡೆಸಿ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದೆ. ನಾಗರಾಜ್ ಅವರನ್ನು ಕೊಲೆ ಮಾಡಿದವರು ಯಾರು? ಯಾವ ಕಾರಣಕ್ಕಾಗಿ ಈ ಬರ್ಬರ ಕೃತ್ಯ ಎಸಗಲಾಗಿದೆ? ಕೊಲೆಗೆ ವೈಯಕ್ತಿಕ ದ್ವೇಷವೇ, ಹಳೆಯ ವೈಷಮ್ಯವೇ ಅಥವಾ ಬೇರೆ ಯಾವುದೇ ಕಾರಣವಿದೆಯೇ ಎಂಬುದು ಸದ್ಯಕ್ಕೆ ನಿಗೂಢವಾಗಿದೆ.

ಬೈಟ್ : ಪದ್ಮಿನಿ ಸಾಹೊ,ಜಿಲ್ಲಾ ವರಿಷ್ಠಾಧಿಕಾರಿ

ಪ್ರಕರಣದ ನಿಖರ ಕಾರಣ ಹಾಗೂ ಆರೋಪಿಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯ ಚುರುಕುಗೊಳಿಸಿರುವ ಸಾಧ್ಯತೆ ಇದ್ದು, ಪೊಲೀಸರ ತನಿಖೆ ಪೂರ್ಣಗೊಂಡ ಬಳಿಕವಷ್ಟೇ ಕೊಲೆಯ ಹಿಂದಿನ ನಿಜವಾದ ಕಾರಣ ಬೆಳಕಿಗೆ ಬರಬೇಕಿದೆ.

ಹಾಡಹಗಲೇ ಜನವಸತಿ ಪ್ರದೇಶದಲ್ಲಿ ನಡೆದ ಈ ಬರ್ಬರ ಕೊಲೆ ಘಟನೆಯಿಂದ ಘಂಟಂವಾರಿಪಲ್ಲಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಚಿಕ್ಕತೇಕಹಳ್ಳಿ ಡಿ ಶಿವಕುಮಾರ್, ಪಬ್ಲಿಕ್ ನೆಕ್ಸ್ಟ್, ಚಿಕ್ಕಬಳ್ಳಾಪುರ

Edited By :
PublicNext

PublicNext

05/09/2026 10:07 pm

Cinque Terre

9.4 K

Cinque Terre

0