ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತಾಳಿಕೋಟೆ: ಮೂರನೇ ದಿನಕ್ಕೆ ಕಾಲಿಟ್ಟ ಅಖಂಡ ಕರ್ನಾಟಕ ರೈತ ಸಂಘದ ಅನಿರ್ದಿಷ್ಟ ಧರಣಿ

ವಿಜಯಪುರ ಜಿಲ್ಲೆಯಲ್ಲಿ ಭೀಕರ ಬರಗಾಲ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಡೀ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಣೆ ಮಾಡಿಸಲು ಸರ್ಕಾರದ ಮೇಲೆ ಒತ್ತಡ ತರದ ಜಿಲ್ಲೆಯ ಶಾಸಕರ ವಿರುದ್ಧ ತಾಳಿಕೋಟೆ ಪಟ್ಟಣದ ಐಬಿ ಎದುರು ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಅನಿರ್ದಿಷ್ಟ ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಆಮ್ ಆದ್ಮಿ ಪಕ್ಷದ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್, ಜಿಲ್ಲೆಯಲ್ಲಿ ಭೀಕರ ಬರಗಾಲವಿದ್ದರೂ ಇಡೀ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಣೆ ಮಾಡಿಸಲು ಜಿಲ್ಲೆಯ ಶಾಸಕರು ಸರ್ಕಾರದ ಮೇಲೆ ಸೂಕ್ತ ಒತ್ತಡ ಹೇರುತ್ತಿಲ್ಲ ಎಂದು ಆರೋಪಿಸಿದರು.

ಇನ್ನೂ ಇದೇ ವೇಳೆ ಮಾತನಾಡಿದ ರೈತ ಮುಖಂಡ ಅರವಿಂದ ಕುಲಕರ್ಣಿ ರೈತರ ಬಗ್ಗೆ ನೈಜ ಕಾಳಜಿ ಇದ್ದರೆ ಜನಪ್ರತಿನಿಧಿಗಳು ನೈತಿಕ ಹೊಣೆ ಹೊತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.

Edited By :
PublicNext

PublicNext

06/09/2026 07:53 am

Cinque Terre

5.7 K

Cinque Terre

0

ಸಂಬಂಧಿತ ಸುದ್ದಿ