ಸವದತ್ತಿ : ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದ ಪಂಚಲಿಂಗೇಶ್ವರ ಸಭಾಭವನದಲ್ಲಿ ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಶಾಂತಿ ಸಭೆ ಆಯೋಜಿಸಲಾಗಿತ್ತು.
ಸಭೆಯಲ್ಲಿ ಮಾತನಾಡಿದ ಸವದತ್ತಿ ಪೊಲೀಸ್ ಇನ್ಸ್‌ಪೆಕ್ಟರ್ ಸುರೇಶ್ ಬೆಂಡೆಗುಂಬಳ, ಗಣೇಶ ಚತುರ್ಥಿ ಹಬ್ಬವನ್ನು ಪೊಲೀಸ್ ಇಲಾಖೆ ನೀಡಿರುವ ಸೂಚನೆಗಳು ಹಾಗೂ ಕಾನೂನಿನ ಚೌಕಟ್ಟಿನೊಳಗೆ ಶಾಂತಿ, ಸೌಹಾರ್ದತೆಯಿಂದ ಆಚರಿಸುವಂತೆ ಗಣೇಶ ಮಂಡಳಿಗಳಿಗೆ ಸೂಚಿಸಿದರು.
ಯಾವುದೇ ರೀತಿಯಲ್ಲಿ ಕಾನೂನು ಉಲ್ಲಂಘನೆ ಮಾಡಿದಲ್ಲಿ, ಅಂತಹವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ರಾಮದುರ್ಗದ ಡಿವೈಎಸ್‌ಪಿ ಚಿದಂಬರ ಮಡಿವಾಳರ ಮಾತನಾಡಿ, ಸಾರ್ವಜನಿಕರು ಹಾಗೂ ಗಣೇಶ ಮಂಡಳಿಯವರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು. ಹಬ್ಬದ ಸಂದರ್ಭದಲ್ಲಿ ಅಗತ್ಯ ಪೊಲೀಸ್ ಭದ್ರತೆ ಒದಗಿಸಲಾಗುವುದು. ಎಲ್ಲರೂ ಶಾಂತಿ ಮತ್ತು ಸೌಹಾರ್ದತೆಯಿಂದ ಗಣೇಶ ಚತುರ್ಥಿ ಆಚರಿಸುವಂತೆ ಮನವಿ ಮಾಡಿದರು.
Kshetra Samachara
06/09/2026 12:39 pm
LOADING...