ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಸುತ್ತಮುತ್ತ ಕಾಡಾನೆಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ಉಜಿರೆಯ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜು ಬಳಿ ಕಾಣಿಸಿಕೊಂಡ ಒಂಟಿ ಸಲಗ, ಪೇಟೆಯತ್ತ ನುಗ್ಗಲು ಯತ್ನಿಸಿದೆ.
ಬೆಳ್ತಂಗಡಿ ಅರಣ್ಯಾಧಿಕಾರಿಗಳು ಹಾಗೂ ಮಂಗಳೂರು ಆನೆ ಕಾರ್ಯಪಡೆಯ ಸಿಬ್ಬಂದಿ ಸ್ಥಳಕ್ಕೆ ತೆರಳಿ, ಕಾಡಾನೆಯನ್ನು ಸುರಕ್ಷಿತವಾಗಿ ಕಾಡಿನತ್ತ ಓಡಿಸಲು ಹರಸಾಹಸ ನಡೆಸಿದರು. ಈ ವೇಳೆ ಆನೆಯತ್ತ ಮೂರು ಸುತ್ತು ಗುಂಡು ಹಾರಿಸಿ, ಅದನ್ನು ಹಿಮ್ಮೆಟ್ಟಿಸಲು ಪ್ರಯತ್ನಿಸಲಾಯಿತು. ಆದರೆ, ಆನೆ ಮತ್ತಷ್ಟು ಜನವಸತಿ ಪ್ರದೇಶದತ್ತ ನುಗ್ಗದಂತೆ ಅರಣ್ಯ ಸಿಬ್ಬಂದಿ ಮುನ್ನೆಚ್ಚರಿಕೆ ವಹಿಸಿದ್ದು, ಕಾರ್ಯಾಚರಣೆ ಮುಂದುವರಿದಿದೆ. ಉಜಿರೆ ಸುತ್ತಮುತ್ತ ಕಾಡಾನೆ ಓಡಾಡುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ.
PublicNext
06/09/2026 08:54 pm
LOADING...