ಮಂಡ್ಯ: ಗ್ರಾಮೀಣ ಭಾಗದ ಜನರಿಗೆ ಬ್ಯಾಂಕಿಂಗ್ ಸೇವೆಗಳನ್ನು ಮತ್ತಷ್ಟು ಸುಲಭವಾಗಿ ತಲುಪಿಸುವ ಉದ್ದೇಶದಿಂದ ಮದ್ದೂರು ತಾಲೂಕಿನ ಶಂಕರಪುರ ವಲಯದ ಚಾಮನಹಳ್ಳಿ ಕಾರ್ಯಕ್ಷೇತ್ರದಲ್ಲಿ ಡಿಜಿಪೇ ಮಾದರಿ ಕಾರ್ಯಾರಂಭ ಕಾರ್ಯಕ್ರಮ ನಡೆಯಿತು.
ಚಾಮನಹಳ್ಳಿ ಹಣ ಸಂಗ್ರಹಣ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷೆ ಅಶ್ವಿನಿ ಹಾಗೂ ಯೋಜನಾಧಿಕಾರಿ ಹಾಲಪ್ಪ ಸೇರಿದಂತೆ ಯೋಜನೆಯ ಅಧಿಕಾರಿಗಳು, ಸೇವಾ ಪ್ರತಿನಿಧಿಗಳು ಹಾಗೂ ಸ್ಥಳೀಯರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಡಿಜಿಪೇ ವ್ಯವಸ್ಥೆಯಿಂದ ಗ್ರಾಮೀಣ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ.
ಹಣ ಪಡೆಯಲು ಬ್ಯಾಂಕ್‌ಗೆ ತೆರಳಿ ಸರತಿ ಸಾಲಿನಲ್ಲಿ ಕಾಯುವ ಅಗತ್ಯ ಕಡಿಮೆಯಾಗಲಿದ್ದು, ತಮ್ಮ ಸಮೀಪದಲ್ಲೇ ಬ್ಯಾಂಕಿಂಗ್ ಸೇವೆ ಪಡೆಯಲು ಸಾಧ್ಯವಾಗಲಿದೆ. ಡಿಜಿಪೇ ಉತ್ತಮ ಹಾಗೂ ಜನಸ್ನೇಹಿ ಕಾರ್ಯಕ್ರಮವಾಗಿದೆ ಎಂದು ಅಭಿಪ್ರಾಯಪಟ್ಟರು.ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ಹಾಲಪ್ಪ, ತಾಲೂಕು ವಿಚಕ್ಷಣಾಧಿಕಾರಿ ಚಂದ್ರಶೇಖರ್, ವಲಯದ ಮೇಲ್ವಿಚಾರಕ ಅರುಣ್ ಕುಮಾರ್, ಸಿಎಸ್‌ಸಿ ನೋಡಲ್ ಅಧಿಕಾರಿ ರಾಜೇಶ್ ಹಾಗೂ ವಲಯದ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.
Kshetra Samachara
07/09/2026 12:37 pm
LOADING...