ಪಡುಬಿದ್ರಿ: ಉಡುಪಿ ಜಿಲ್ಲೆಯ ಪಡುಬಿದ್ರಿಯಲ್ಲಿ ತೀವ್ರಗೊಂಡಿರುವ ಕಡಲ್ಕೊರೆತ ಪ್ರದೇಶಕ್ಕೆ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಈ ವೇಳೆ ಸಚಿವರಿಗೆ ಸ್ಥಳೀಯ ಮುಖಂಡರು ಕಡಲ್ಕೊರೆತ ಸಮಸ್ಯೆ ಬಗ್ಗೆ ಮಾಹಿತಿ ನೀಡಿದರು.
ಬಳಿಕ ಪ್ರತಿಕ್ರಿಯೆ ನೀಡಿದ ಸಚಿವರು, ಕಡಲ್ಕೊರೆತದಿಂದ ಪ್ರವಾಸೋದ್ಯಮಕ್ಕೂ ಹೊಡೆತ ಬೀಳುವ ಸಾಧ್ಯತೆ ಇದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಸರ್ಕಾರ ಪ್ರಯತ್ನಿಸಲಿದೆ ಎಂದು ಭರವಸೆ ನೀಡಿದ್ದಾರೆ. ಅಲ್ಲದೇ, ಕರಾವಳಿ ತೀರದಲ್ಲಿ ಅಕ್ರಮ ರೆಸಾರ್ಟ್ ಹಾಗೂ ಸರ್ಕಾರಿ ಜಾಗದ ಅತಿಕ್ರಮಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಕಡಲ್ಕೊರೆತದಿಂದ ಕರಾವಳಿ ಭಾಗದ ಜನರಿಗೆ ಮಾತ್ರವಲ್ಲ, ಪ್ರವಾಸೋದ್ಯಮ ಕ್ಷೇತ್ರಕ್ಕೂ ಹೊಡೆತ ಬೀಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಇದು ಗಂಭೀರ ಸಮಸ್ಯೆ ಎಂದು ಹೇಳಿದ್ದಾರೆ.
PublicNext
07/09/2026 04:43 pm
LOADING...