ದಾವಣಗೆರೆ: ನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಯುವಕರು ತಲ್ವಾರ್ ಹಾಗೂ ದೊಣ್ಣೆಗಳಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ನಡುರಸ್ತೆಯಲ್ಲೇ ಎರಡು ಗುಂಪಿನ ಯುವಕರು ಪರಸ್ಪರ ಅಟ್ಟಾಡಿಸಿಕೊಂಡು ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಗರದ ಬಿ.ಡಿ. ಲೇಔಟ್ ನಿವಾಸಿಗಳಾದ ಮೈನು, ಜುನೇದ್ ಹಾಗೂ ಇರ್ಫಾನ್ ಸೇರಿದಂತೆ ನಾಲ್ವರು ಯುವಕರು ರಸ್ತೆಯಲ್ಲಿ ನಿಂತಿದ್ದಾಗ, ಮಹಮ್ಮದ್ ಸೇರಿದಂತೆ 20ಕ್ಕೂ ಹೆಚ್ಚು ಯುವಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಯಿಂದ ಮೈನು, ಜುನೇದ್ ಹಾಗೂ ಇರ್ಫಾನ್ ಸೇರಿದಂತೆ ಹಲವರು ರಕ್ತದ ಮಡುವಿನಲ್ಲಿ ರಸ್ತೆಯಲ್ಲೇ ಬಿದ್ದಿದ್ದರು.
ತಲೆ ಹಾಗೂ ದೇಹದ ಪ್ರಮುಖ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ತಕ್ಷಣ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಘಟನೆಯಿಂದ ಸಾರ್ವಜನಿಕರು ಗಾಬರಿಗೊಂಡಿದ್ದಾರೆ. ಈ ಸಂಬಂಧ ಅಜಾದ್ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ನಾಲ್ವರನ್ನು ಬಂಧಿಸಿದ್ದಾರೆ.
Kshetra Samachara
07/09/2026 08:24 pm
LOADING...