ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಡ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಸಭೆ

ಮಂಡ್ಯ : ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಗಾಂಧಿನಗರದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಭಕ್ತಿಭಾವದಿಂದ ನೆರವೇರಿತು.

ಧಾರ್ಮಿಕ ಆಚರಣೆಗಳು ನಮ್ಮ ಸಂಸ್ಕೃತಿ, ನಂಬಿಕೆ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವ ಪ್ರಮುಖ ಮಾರ್ಗಗಳಾಗಿವೆ ಎಂದು ಗಣ್ಯರು ಅಭಿಪ್ರಾಯಪಟ್ಟರು. ಇದೇ ವೇಳೆ ಮಹಿಳೆಯರು ಧಾರ್ಮಿಕ ಹಾಗೂ ಸಾಮಾಜಿಕ ವಿಚಾರಗಳಲ್ಲಿ ಹೆಚ್ಚು ಜಾಗೃತರಾಗಬೇಕಾದ ಅಗತ್ಯವಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪೊಲೀಸ್ ಅಧೀಕ್ಷಕಿ ಡಾ. ಶೋಭರಾಣಿ, ಪ್ರಾದೇಶಿಕ ನಿರ್ದೇಶಕ ಯೋಗೇಶ್ ಎಂ., ಧಾರ್ಮಿಕ ಉಪನ್ಯಾಸಕ ಶ್ರೀನಿವಾಸ ಶೆಟ್ಟಿ, ಸಮಿತಿ ಅಧ್ಯಕ್ಷ ನಾಗೇಶ್, ಪತ್ರಕರ್ತ ಪ್ರವೀಣ್ ಹಾಗೂ ಜಿಲ್ಲಾ ನಿರ್ದೇಶಕ ಚೇತನ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುಮಾರು 800 ಮಂದಿ ಭಾಗವಹಿಸಿದ್ದರು.

Edited By :
Kshetra Samachara

Kshetra Samachara

08/09/2026 05:05 pm

Cinque Terre

620

Cinque Terre

0