ಹುಣಸಗಿ : ಭಕ್ತರ ನಂಬಿಕೆ, ಜನಪದ ಸಂಪ್ರದಾಯ ಮತ್ತು ಧಾರ್ಮಿಕ ಆಚರಣೆಗಳ ಸಂಗಮಕ್ಕೆ ಸಾಕ್ಷಿಯಾದ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ದೇವರಗಡ್ಡಿಯ ಗದ್ದೆಮ್ಮ ದೇವಿ ತೆಪ್ಪೋತ್ಸವ ಅದ್ದೂರಿಯಾಗಿ ಜರುಗಿತು.
ಸಾವಿರಾರು ಭಕ್ತರು ಉತ್ಸವದಲ್ಲಿ ಪಾಲ್ಗೊಂಡು, ಉತ್ತಮ ಮಳೆ ಹಾಗೂ ಸಮೃದ್ಧ ಬೆಳೆಯಾಗಲಿ ಎಂದು ದೇವಿಯ ದರ್ಶನ ಪಡೆದು, ತಮ್ಮ ಇಷ್ಟಾರ್ಥಗಳು ನೆರವೇರಲಿ ಎಂದು ಪ್ರಾರ್ಥಿಸಿದರು.
ಗದ್ದೆಮ್ಮ ದೇವಿಯ ತೆಪ್ಪೋತ್ಸವದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಪೂಜೆ, ಅಭಿಷೇಕ, ಅಲಂಕಾರ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು.
ಸಂಜೆ ವೇಳೆ ದೇಗುಲದಿಂದ ದೇವಿಯ ಪಲ್ಲಕ್ಕಿಯಲ್ಲಿ ಮೆರವಣಿಗೆ ಮೂಲಕ ನದಿಯ ದಡದ ಬಳಿ ತೆರಳಿ, ಕಟ್ಟೆಯ ಮೇಲೆ ದೇವಿಯ ಉತ್ಸವ ಮೂರ್ತಿಯನ್ನು ಕೂರಿಸಿ ಪೂಜೆ ಸಲ್ಲಿಸಲಾಯಿತು.
ಕೃಷ್ಣಾ ನದಿಯ ತೀರದಲ್ಲಿ ಸೇರಿದ್ದ ಭಕ್ತರ ಸಮ್ಮುಖದಲ್ಲಿ ತೆಪ್ಪೋತ್ಸವ ನಡೆಸಲಾಯಿತು. ತೆಪ್ಪೋತ್ಸವದ ದೃಶ್ಯ ಭಕ್ತರ ಕಣ್ಮನ ಸೆಳೆಯುವಂತಿತ್ತು.
ಹೂವು ಹಾಗೂ ದೀಪಾಲಂಕಾರಗಳಿಂದ ಸಿಂಗಾರಗೊಂಡ ತೆಪ್ಪದಲ್ಲಿ ದೇವಿಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ, ನದಿಯಲ್ಲಿ ತೆಪ್ಪೋತ್ಸವ ನಡೆಸಲಾಯಿತು.
ವರದಿ : ಮೌನೇಶ ಬಿ. ಮಂಗಿಹಾಳ, ಪಬ್ಲಿಕ್ ನೆಕ್ಸ್ಟ್, ಯಾದಗಿರಿ
PublicNext
08/09/2026 11:34 pm
LOADING...