ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮಂತರ್ ಗೌಡ ಗುದ್ದಲಿಪೂಜೆ

ಕುಶಾಲನಗರ : ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದರು.

ನಂಗಾರು ಜಗ್ಗ ಅವರ ಮನೆ ಬಳಿ ನಡೆದ ಕಾರ್ಯಕ್ರಮದಲ್ಲಿ ಬಾಳುಗೋಡುವಿನಿಂದ ರಂಗಸಮುದ್ರದ ಗಡಿವರೆಗೆ ₹2.50 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಯಿತು.

ಇದೇ ಸಂದರ್ಭದಲ್ಲಿ ಶಾಸಕ ಡಾ. ಮಂತರ್ ಗೌಡ ಮಾತನಾಡಿ, ಅಭಿವೃದ್ಧಿ ವಿಚಾರದಲ್ಲಿ ಯಾವುದೇ ತಾರತಮ್ಯ ಮಾಡುವುದಿಲ್ಲ. ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ರಸ್ತೆ, ಚರಂಡಿ ಸೇರಿದಂತೆ ಯಾವುದೇ ಕಾಮಗಾರಿಗಳಾದರೂ ಗುಣಮಟ್ಟದ ಕಾಮಗಾರಿ ಆಗಬೇಕು ಎಂದು ಗುತ್ತಿಗೆದಾರರಿಗೆ ಸೂಚನೆ ನೀಡಿದರು. ರಾಜಕೀಯ ಮಾಡುವುದು ಚುನಾವಣೆ ಸಂದರ್ಭದಲ್ಲಿ ಮಾತ್ರ. ಅಭಿವೃದ್ಧಿ ವಿಚಾರದಲ್ಲಿ ನಾನು ರಾಜಕೀಯ ಮಾಡುವುದಿಲ್ಲ. ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆ ಎಂದು ತಿಳಿಸಿದರು.

Edited By : PublicNext Desk
Kshetra Samachara

Kshetra Samachara

09/09/2026 06:58 am

Cinque Terre

540

Cinque Terre

0

ಸಂಬಂಧಿತ ಸುದ್ದಿ