ತುಮಕೂರು : ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರನ್ನು ರಾಜ್ಯ ಅಪೆಕ್ಸ್ ಬ್ಯಾಂಕ್‌ಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಧನಿಯಾಕುಮಾರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಸಹಕಾರಿ ಕ್ಷೇತ್ರದ ಮುತ್ಸದ್ದಿ, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಹಕಾರ ಸಚಿವರಾದ ಕೆ.ಎನ್. ರಾಜಣ್ಣ ಅವರಿಗೆ ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನ ನೀಡಬೇಕು. ತುಮಕೂರು ಜಿಲ್ಲೆಯ ಹಿಂದುಳಿದ ವರ್ಗಗಳ ಪಾಲಿಗೆ ದೇವರಾಜ ಅರಸು ಅವರಂತೆ ಇರುವ ಕೆ.ಎನ್.ಆರ್., ರಾಜ್ಯದಲ್ಲಿ ಸಹಕಾರ ಕ್ಷೇತ್ರದ ಬೆಳವಣಿಗೆಗೆ ಶ್ರಮಿಸಿದ್ದಾರೆ. ಜಿಲ್ಲೆಯ ಎಲ್ಲಾ ಸಮುದಾಯಗಳ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿರುವ ಜನಾನುರಾಗಿಯಾಗಿದ್ದಾರೆ ಎಂದು ಹೇಳಿದ್ದಾರೆ.
ಈ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಸಹಕಾರ ಸಚಿವರಾಗಿ ಉತ್ತಮ ಕಾರ್ಯನಿರ್ವಹಿಸುತ್ತಿದ್ದ ಕೆ.ಎನ್. ರಾಜಣ್ಣ ಅವರನ್ನು ವಿನಾಕಾರಣ ಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದು, ಹಿರಿಯ ನಾಯಕರು ಹಾಗೂ ತುಮಕೂರು ಜಿಲ್ಲೆಗೆ ತುಂಬಾ ಅನ್ಯಾಯ ಮಾಡಲಾಗಿದೆ. ಇತ್ತೀಚೆಗಷ್ಟೇ ಮಧುಗಿರಿಯಲ್ಲಿ ನಡೆದ ಅಕ್ಷರ ಅಮೃತ ಯೋಜನೆಯಡಿ ಪ್ರತಿನಿತ್ಯ 1,500 ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಿದ್ದಾರೆ. ಮಧುಗಿರಿ ಕ್ಷೇತ್ರವನ್ನು ಹಿಂದೆಂದೂ ಮಾಡದಷ್ಟು ಅಭಿವೃದ್ಧಿ ಮಾಡಿದ್ದಾರೆ.
ಇಂತಹ ನಾಯಕ ಕೆ.ಎನ್. ರಾಜಣ್ಣ ಅವರಿಗೆ ಈ ತಿಂಗಳ 10ರಂದು ನಡೆಯುವ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಅಧ್ಯಕ್ಷರಾಗುವ ಅವಕಾಶ ನೀಡಿ ಗೌರವಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಧನಿಯಾಕುಮಾರ್ ಹೇಳಿದ್ದಾರೆ.
Kshetra Samachara
09/09/2026 08:21 am
LOADING...