ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ - ಕಾಲೇಜಿನಲ್ಲಿ ಕುರ್ಚಿ ವಿಚಾರಕ್ಕೆ ಗೇಲಿ ಮಾಡಿ ವಿದ್ಯಾರ್ಥಿನಿ ಮೇಲೆ ಹಲ್ಲೆ

ಕೆಜಿಎಫ್ - ಕಾಲೇಜು ತರಗತಿ ಕೊಠಡಿಯಲ್ಲಿ ಕುರ್ಚಿ ಮುಂದಕ್ಕೆ ಸರಿಸುವ ವಿಚಾರಕ್ಕೆ ಆರಂಭವಾದ ಗಲಾಟೆ ಸಹ ವಿದ್ಯಾರ್ಥಿನಿ ಮೇಲೆ ಹಲ್ಲೆ ಮಾಡುವ ಹಂತಕ್ಕೆ ತಲುಪಿರುವ ಘಟನೆ ಕೆಜಿಎಫ್ ನಗರದ ಮಹಾವೀರ್ ಜೈನ್ ಕಾಲೇಜಿನಲ್ಲಿ ನಡೆದಿದೆ. ತರಗತಿ ಕೊಠಡಿಯಲ್ಲಿ ಕುರ್ಚಿಯನ್ನು ಮುಂಭಾಗಕ್ಕೆ ಸರಿಸುವ ವಿಚಾರವಾಗಿ ಇಬ್ಬರು ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಬಳಿಕ ಈ ವಿಚಾರಕ್ಕೆ ಸಂಬಂಧಿಸಿದಂತೆ ನಾಲ್ವರು ವಿದ್ಯಾರ್ಥಿಗಳು ಸಹ ವಿದ್ಯಾರ್ಥಿನಿಯನ್ನು ಗೇಲಿ ಮಾಡಿದ್ದಾರೆ ಎನ್ನಲಾಗಿದೆ. ಗೇಲಿ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿದ್ಯಾರ್ಥಿನಿ, ಹಲ್ಲೆಗೆ ಮುಂದಾಗಿದ್ದ ವಿದ್ಯಾರ್ಥಿಯೊಬ್ಬನಿಗೆ ಕಪಾಳಕ್ಕೆ ಹೊಡೆದಿದ್ದಾಳೆ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಸಹ ವಿದ್ಯಾರ್ಥಿ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಹಲ್ಲೆ ನಡೆದ ಕೆಲವೇ ಕ್ಷಣಗಳಲ್ಲಿ ವಿದ್ಯಾರ್ಥಿನಿ ಪ್ರಜ್ಞೆ ತಪ್ಪಿ ತರಗತಿ ಕೊಠಡಿಯಲ್ಲೇ ಕುಸಿದುಬಿದ್ದಿದ್ದಾಳೆ. ಈ ಸಂಪೂರ್ಣ ಘಟನೆ ತರಗತಿಯಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ.

Edited By :
PublicNext

PublicNext

09/09/2026 12:31 pm

Cinque Terre

6.11 K

Cinque Terre

1