ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ : ಅವಹೇಳನಕಾರಿ ಹೇಳಿಕೆ ಆರೋಪ ಖಂಡಿಸಿ ಪ್ರತಿಭಟನೆ

ಗದಗ : ಬುದ್ಧ, ಬಸವಣ್ಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ವೇದಮೂರ್ತಿ ವಿರುದ್ಧ ಕಾನೂನು ಕ್ರಮ ಕೈಗೊಂಡು ರಾಜ್ಯದಿಂದ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಸ್ಲಂ ಜನಾಂದೋಲನ ಕರ್ನಾಟಕ ಹಾಗೂ ಗದಗ ಜಿಲ್ಲಾ ಸ್ಲಂ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ಬಳಿಕ ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ್ ಆರ್. ಮಾನ್ವಿ ಅವರ ನೇತೃತ್ವದಲ್ಲಿ ಪ್ರತಿಭಟನಾಕಾರರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಸೌಹಾರ್ದತೆಯ ಸಂದೇಶ ಸಾರಿದ ಮಹನೀಯರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹೇಳಿಕೆ ನೀಡಲಾಗಿದೆ ಎಂದು ಆರೋಪಿಸಿ, ಈ ಕುರಿತು ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಒತ್ತಾಯಿಸಿದರು.

ಇದೇ ವೇಳೆ ಪೌರ ಕಾರ್ಮಿಕರ ಸಮಸ್ಯೆಗಳಿಗೂ ಸರ್ಕಾರ ಶೀಘ್ರ ಪರಿಹಾರ ಕಲ್ಪಿಸಬೇಕು. ನಗರಗಳ ಸ್ವಚ್ಛತೆಗಾಗಿ ದುಡಿಯುತ್ತಿರುವ ಪೌರ ಕಾರ್ಮಿಕರನ್ನು ಖಾಯಂಗೊಳಿಸಿ ನ್ಯಾಯ ಒದಗಿಸಬೇಕು ಹಾಗೂ ಪೌರ ಕಾರ್ಮಿಕ ಸಮುದಾಯಕ್ಕೆ ಅವಮಾನವಾಗುವ ರೀತಿಯಲ್ಲಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿರುವ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Edited By : PublicNext Desk
Kshetra Samachara

Kshetra Samachara

09/09/2026 04:22 pm

Cinque Terre

11.82 K

Cinque Terre

0

ಸಂಬಂಧಿತ ಸುದ್ದಿ