ಕಲಬುರಗಿ : ಮೋಜು-ಮಸ್ತಿಗಾಗಿ ಕಳ್ಳತನಕ್ಕೆ ಇಳಿದ ಮೂವರು ಖತರ್ನಾಕ್ ಕಳ್ಳರನ್ನು ಆಳಂದ ಪೊಲೀಸರು ಬಂಧಿಸಿದ್ದಾರೆ. ಆಳಂದ ಪೊಲೀಸರು ಕಾರ್ಯಾಚರಣೆ ನಡೆಸಿ 12 ಬೈಕ್‌ಗಳನ್ನು ಜಪ್ತಿ ಮಾಡಿದ್ದಾರೆ.
ಆರೋಪಿಗಳು ಮದ್ಯಪಾನ ಹಾಗೂ ಸಿಗರೇಟ್‌ಗಾಗಿ ಹಣದ ಅಗತ್ಯವಿದ್ದಾಗ ಬೈಕ್‌ಗಳನ್ನು ಕಳ್ಳತನ ಮಾಡುತ್ತಿದ್ದರು ಎನ್ನಲಾಗಿದೆ. ಆರೋಪಿಗಳಿಂದ ಸುಮಾರು ₹5.44 ಲಕ್ಷ ಮೌಲ್ಯದ ಒಟ್ಟು 12 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ.
ವಿವಿಧ ಕಡೆಗಳಲ್ಲಿ ಬೈಕ್‌ಗಳನ್ನು ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಆಳಂದ ಠಾಣೆಯ ಪಿಐ ಶರಣ ಬಸಪ್ಪ ಕೊಡ್ಲಾ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ಬಂಧಿಸಲಾಗಿದೆ. ಈ ಕುರಿತು ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
Kshetra Samachara
09/09/2026 06:47 pm
LOADING...