ಕಲಬುರಗಿ : ನಗರದ ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಅನಿರೀಕ್ಷಿತವಾಗಿ ದಾಳಿ ನಡೆಸಿದ ವೇಳೆ ಒಂದು ಮೊಬೈಲ್ ಫೋನ್ ಪತ್ತೆಯಾಗಿದೆ.
ಜೈಲಿನ ಬ್ಯಾರಕ್ ನಂಬರ್ 06ರಲ್ಲಿ ಪರಿಶೀಲನೆ ನಡೆಸಿದಾಗ, ಸಿಮ್ ಕಾರ್ಡ್ ಇಲ್ಲದ ಹೀರೋ ಕಂಪನಿಯ ಮೊಬೈಲ್ ಪತ್ತೆಯಾಗಿದೆ. ಈ ಕುರಿತು ಕಾರಾಗೃಹದ ಮುಖ್ಯ ಅಧೀಕ್ಷಕರು ದೂರು ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
10/09/2026 07:49 am
LOADING...