ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಬುರಗಿ : ಕಿಡಿಗೇಡಿಗಳಿಂದ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ; ಧಿಡೀರ್ ಪ್ರತಿಭಟನೆ

ಕಲಬುರಗಿ : ಕಮಲಾಪುರ ತಾಲೂಕಿನ ಚೇಂಗಾಟ ಗ್ರಾಮದಲ್ಲಿ ಕಿಡಿಗೇಡಿಗಳು ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ವಿರೂಪಗೊಳಿಸಿ ಅವಮಾನ ಮಾಡಿದ ಹಿನ್ನೆಲೆಯಲ್ಲಿ ದಲಿತ ಸಂಘಟನೆಗಳಿಂದ ಧಿಡೀರ್ ಪ್ರತಿಭಟನೆ ನಡೆಸಲಾಯಿತು.

ಗ್ರಾಮದ ಮುಖ್ಯ ರಸ್ತೆ ಬಂದ್ ಮಾಡಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ರಸ್ತೆ ಮಧ್ಯೆ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಅಂಬೇಡ್ಕರ್ ಅವರ ಭಾವಚಿತ್ರ ಹರಿದ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸಬೇಕು. ಭಾವಚಿತ್ರ ಇರುವ ಸ್ಥಳದಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಿ ರಕ್ಷಣೆ ನೀಡಬೇಕೆಂದು ಭೀಮ್ ಆರ್ಮಿ ಆಗ್ರಹಿಸಿತು.

ಇನ್ನು ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಘಟನಾ ಸ್ಥಳಕ್ಕೆ ರಟಕಲ್ ಪೊಲೀಸ್ ಸಿಬ್ಬಂದಿ ಹಾಗೂ ತಹಶೀಲ್ದಾರ್ ಆಗಮಿಸಿ ಪರಿಶೀಲನೆ ನಡೆಸಿದರು. ಈ ಕುರಿತು ರಟಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Edited By : PublicNext Desk
PublicNext

PublicNext

10/09/2026 08:04 am

Cinque Terre

10.7 K

Cinque Terre

0

ಸಂಬಂಧಿತ ಸುದ್ದಿ