ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಕಲೇಶಪುರ : ಕಾಮನಹಳ್ಳಿಯಲ್ಲಿ ಕಾಡಾನೆಗಳ ದಾಂಧಲೆ!

ಸಕಲೇಶಪುರ : ತಾಲೂಕಿನ ಕಾಮನಹಳ್ಳಿ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಪುರಾತನ ಬಸವಣ್ಣ ದೇವಸ್ಥಾನದ ಕಲ್ಲಿನ ಕಂಬಗಳನ್ನು ಕಾಡಾನೆಗಳು ತಳ್ಳಿ ಬೀಳಿಸಿರುವ ಘಟನೆ ಬೆಳಕಿಗೆ ಬಂದಿದೆ.

ವಾಟ್ಸಾಪ್ ಗ್ರೂಪ್‌ಗಳಲ್ಲಿ ಹರಿದಾಡಿದ ಮಾಹಿತಿಯ ಆಧಾರದ ಮೇಲೆ ಸಕಲೇಶಪುರ ವಲಯ ಅರಣ್ಯಾಧಿಕಾರಿಗಳು ಹಾಗೂ ಆರ್‌ಆರ್‌ಟಿ ಸಿಬ್ಬಂದಿ ಗ್ರಾಮಸ್ಥರಾದ ಹರೀಶ್ ಮತ್ತು ವೀರೇಂದ್ರ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚೆಟ್ಟಿಯಾರ್ ಕಾಡಿನ ಸಮೀಪವಿರುವ ದೇವಸ್ಥಾನದ ಕಲ್ಲಿನ ಕಂಬಗಳಿಗೆ ಹಾನಿಯಾಗಿರುವುದು ದೃಢಪಟ್ಟಿದೆ.

ಇದೇ ವೇಳೆ ಹರೀಶ್ ಹಾಗೂ ವೀರೇಂದ್ರ ಅವರ ಕಾಫಿ ತೋಟಗಳಿಗೆ ಕಾಡಾನೆಗಳು ನುಗ್ಗಿ ಕಾಫಿ ಗಿಡಗಳನ್ನು ತುಳಿದು ಹಾನಿ ಮಾಡಿರುವುದನ್ನೂ ಅಧಿಕಾರಿಗಳು ಪರಿಶೀಲಿಸಿದರು. ನಿಯಮಾನುಸಾರ ಸೂಕ್ತ ಪರಿಹಾರ ಕೊಡಿಸುವುದಾಗಿ ಅಧಿಕಾರಿಗಳು ತಿಳಿಸಿದರು.

ಕಾಡಾನೆಗಳ ಚಲನವಲನದ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ನೀಡಿ, ಮುಂಜಾಗ್ರತೆ ವಹಿಸುವಂತೆ ಅರಣ್ಯ ಇಲಾಖೆ ಸೂಚಿಸಿದೆ. ಕಾಡಾನೆಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕವೂ ಹೆಚ್ಚಾಗಿದೆ.

Edited By :
PublicNext

PublicNext

10/09/2026 12:25 pm

Cinque Terre

4.81 K

Cinque Terre

0