ಚನ್ನಮ್ಮನ ಕಿತ್ತೂರು : ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವಗಳ ಹಾದಿಯಲ್ಲಿ ಸಾಗುತ್ತಿರುವ ರಾಜ್ಯದ ಪ್ರಭಾವಿ ನಾಯಕ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ತೇಜೋವಧೆ ಮಾಡಲು ಕೇಂದ್ರ ಸರ್ಕಾರ ಇಡಿ (ಜಾರಿ ನಿರ್ದೇಶನಾಲಯ) ಸಂಸ್ಥೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಕಿತ್ತೂರು ಕ್ಷೇತ್ರದ ಕಾಂಗ್ರೆಸ್ ಮುಖಂಡ ಹಾಗೂ ಸಮಾಜ ಸೇವಕ ಹಬೀಬ್ ಶಿಲೇದಾರ್ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಚನ್ನಮ್ಮಾಜಿ ವೃತ್ತದಲ್ಲಿ ಆಯೋಜಿಸಲಾಗಿದ್ದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಅವರ ವಿರುದ್ಧ ನಡೆದಿರುವ ರಾಜಕೀಯ ಪ್ರೇರಿತ ಇಡಿ ದಾಳಿಯನ್ನು ತೀವ್ರವಾಗಿ ಖಂಡಿಸಿದರು.
ಕಾಂಗ್ರೆಸ್ ಮುಖಂಡರು, ರೈತ ಸಂಘದ ಕಾರ್ಯಕರ್ತರು ಹಾಗೂ ಸತೀಶ್ ಜಾರಕಿಹೊಳಿ ಅವರ ಅಭಿಮಾನಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
PublicNext
10/09/2026 03:57 pm
LOADING...