ಮಂಡ್ಯ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಹೊಸಹಳ್ಳಿ ಯೋಜನಾ ಕಚೇರಿ ವ್ಯಾಪ್ತಿಯ ತಾವರೆಕೆರೆ ವಲಯದ ವತಿಯಿಂದ ಗತ್ತಲಿನ ಕುವೆಂಪು ಪದವಿ ಪೂರ್ವ ಕಾಲೇಜಿನಲ್ಲಿ ‘ಸ್ವಾಸ್ತ್ಯ ಸಂಕಲ್ಪ’ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ತಿಮ್ಮರಾಜು ಅವರು ವಿದ್ಯಾರ್ಥಿಗಳಿಗೆ ದುಶ್ಚಟ ಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರದ ಕುರಿತು ಮಾಹಿತಿ ನೀಡಿದರು. ದುಶ್ಚಟಗಳಿಂದ ಉಂಟಾಗುವ ದುಷ್ಪರಿಣಾಮಗಳು, ಅವುಗಳಿಂದ ದೂರವಿರುವ ಅಗತ್ಯ ಹಾಗೂ ದುಶ್ಚಟಗಳನ್ನು ತಡೆಗಟ್ಟುವಲ್ಲಿ ವಿದ್ಯಾರ್ಥಿಗಳು ವಹಿಸಬೇಕಾದ ಜವಾಬ್ದಾರಿಗಳ ಬಗ್ಗೆ ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಒಟ್ಟು 55 ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲು ಇಂತಹ ಜಾಗೃತಿ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದು ತಿಳಿಸಲಾಯಿತು.
ಕಾರ್ಯಕ್ರಮದಲ್ಲಿ ಮೇಲ್ವಿಚಾರಕರು ಹಾಗೂ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.
Kshetra Samachara
10/09/2026 04:27 pm
LOADING...