ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಕ್ತಿ ಭಾವದಿಂದ ನಡೆದ ಕೃಷ್ಣ ಜನ್ಮಾಷ್ಟಮಿ, ಕುಣಿದು ಕುಪ್ಪಳಿಸಿ ಸಂಭ್ರಮಿಸಿದ ಗ್ರಾಮಸ್ಥರು

ಹೊಸಪೇಟೆ : ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಸೀತಾರಾಮ್ ತಾಂಡಾದಲ್ಲಿ ಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಸಂಭ್ರಮ ಹಾಗೂ ಭಕ್ತಿಭಾವದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀಕೃಷ್ಣನಿಗೆ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ತಾಂಡಾದ ಮಹಿಳೆಯರು, ಮಕ್ಕಳು ಸೇರಿದಂತೆ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕೃಷ್ಣನ ಆರಾಧನೆ ಮಾಡಿದರು.

ಶ್ರೀಕೃಷ್ಣನ ಜನ್ಮದಿನದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿದ್ದು, ಇಡೀ ತಾಂಡಾದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಭಕ್ತರು ಭಜನೆ, ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.

Edited By :
PublicNext

PublicNext

10/09/2026 07:59 pm

Cinque Terre

7.44 K

Cinque Terre

0

ಸಂಬಂಧಿತ ಸುದ್ದಿ