ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ತೈಲೂರು ದಂಡಿನ ಮಾರಮ್ಮ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗಾಗಿ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಧರ್ಮದಾನ ಕಾರ್ಯಕ್ರಮದಡಿ ನೀಡಲಾದ ₹1.50 ಲಕ್ಷ ಅನುದಾನದ ಡಿಡಿಯನ್ನು ತೈಲೂರು ದಂಡಿನ ಮಾರಮ್ಮ ದೇವಸ್ಥಾನದ ಟ್ರಸ್ಟ್‌ಗೆ ವಿತರಿಸಲಾಯಿತು.
ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿ ಅರ್ಧಕ್ಕೆ ನಿಂತಿದ್ದ ಹಿನ್ನೆಲೆಯಲ್ಲಿ ನೀಡಲಾದ ಅನುದಾನವು ಕಾಮಗಾರಿಯನ್ನು ಪುನರಾರಂಭಿಸಿ ಪೂರ್ಣಗೊಳಿಸಲು ಸಹಕಾರಿಯಾಗಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಸಾಮಾಜಿಕ ಕಳಕಳಿ ಹಾಗೂ ಸಮಾಜದ ಒಳಿತಿಗಾಗಿ ನಡೆಸುತ್ತಿರುವ ವಿವಿಧ ಕಾರ್ಯಕ್ರಮಗಳ ಬಗ್ಗೆ ಗಣ್ಯರು ಹಾಗೂ ಗ್ರಾಮಸ್ಥರು ಮೆಚ್ಚುಗೆ ಮತ್ತು ಅಭಿನಂದನೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಚೇತನ, ಯೋಜನಾಧಿಕಾರಿ ಹಾಲಪ್ಪ ಎಂ.ಎ., ವಲಯ ಮೇಲ್ವಿಚಾರಕಿ ಲತಾ, ಸೇವಾ ಪ್ರತಿನಿಧಿ ಅಭಿಲಾಷ ಸೇರಿದಂತೆ ದೇವಸ್ಥಾನದ ಟ್ರಸ್ಟ್‌ನವರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
Kshetra Samachara
10/09/2026 09:51 pm
LOADING...