ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಗ್ ಎಕ್ಸ್‌ಕ್ಲೂಸಿವ್ : ದೇಶವ್ಯಾಪಿ ಹಬ್ಬಿದ ನಕಲಿ ಮೆಡಿಕಲ್ ಮಾಫಿಯಾ ಜಾಲಕ್ಕೆ ಎಸ್‌ಐಟಿ ಶಾಕ್: ದೇಶದ 9 ಕಡೆ ಏಕಕಾಲಕ್ಕೆ ದಾಳಿ

ಬೆಂಗಳೂರು: ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಹರಡಿರುವ ಬೃಹತ್ ನಕಲಿ ಮೆಡಿಕಲ್ ಮಾಫಿಯಾದ ಬೆನ್ನುಬಿದ್ದಿರುವ ಎಸ್‌ಐಟಿ ಅಧಿಕಾರಿಗಳು, ಇಂದು ದೇಶಾದ್ಯಂತ ಏಕಕಾಲಕ್ಕೆ ಮಿಂಚಿನ ದಾಳಿ ನಡೆಸಿದ್ದಾರೆ.

ತಾವರೆಕೆರೆಯಲ್ಲಿ ಇತ್ತೀಚೆಗೆ ಪತ್ತೆಯಾಗಿದ್ದ ನಕಲಿ ಔಷಧ ಜಾಲದ ತನಿಖೆ ಕೈಗೆತ್ತಿಕೊಂಡ ಎಸ್‌ಐಟಿ, ಈ ಮಾಫಿಯಾದ ಕರಾಳ ಮುಖವನ್ನು ಹೊರಗೆಳೆದಿದೆ. ಮಹಾರಾಷ್ಟ್ರ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಹರಿಯಾಣ, ದೆಹಲಿ ಹಾಗೂ ಬೆಂಗಳೂರು ಸೇರಿದಂತೆ ದೇಶದ ಒಟ್ಟು 9 ಪ್ರಮುಖ ಸ್ಥಳಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ಪ್ರಮುಖ ಮೆಡಿಕಲ್ ಫಾರ್ಮಾ ಕಂಪನಿಗಳು ಹಾಗೂ ಈ ಜಾಲದಲ್ಲಿ ಭಾಗಿಯಾಗಿರುವ ಶಂಕಿತ ಆರೋಪಿಗಳ ಕಚೇರಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿರುವ ಪ್ರಮುಖ ಆರೋಪಿಯೊಬ್ಬನ ಕಚೇರಿಯ ಮೇಲೆಯೂ ಎಸ್‌ಐಟಿ ದಾಳಿ ನಡೆಸಿದ್ದು, ಪ್ರಮುಖ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ದೇಶದ ಜನರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿದ್ದ ಈ ಜಾಲದ ಮೂಲವನ್ನು ಸಂಪೂರ್ಣವಾಗಿ ಬೇರುಸಹಿತ ಕಿತ್ತುಹಾಕಲು ಎಸ್‌ಐಟಿ ಕಾರ್ಯಾಚರಣೆ ಚುರುಕುಗೊಳಿಸಿದೆ.

Edited By : Nirmala Aralikatti
PublicNext

PublicNext

11/09/2026 10:29 am

Cinque Terre

22.33 K

Cinque Terre

3

ಸಂಬಂಧಿತ ಸುದ್ದಿ