ಬಂಗಾರಪೇಟೆ : ಗ್ರಾಮೀಣ ಪ್ರದೇಶದ ಕೃಷಿ ಪಂಪ್‌ಸೆಟ್‌ಗಳಿಗೆ ದಿನಕ್ಕೆ ಕನಿಷ್ಠ 8 ಗಂಟೆ ಗುಣಮಟ್ಟದ ವಿದ್ಯುತ್ ಪೂರೈಸಬೇಕು ಹಾಗೂ ವಿದ್ಯುತ್ ಕೊರತೆಯಿಂದ ಒಣಗುತ್ತಿರುವ ಬೆಳೆಗಳ ಸಮೀಕ್ಷೆಗೆ ವಿಶೇಷ ಅಧಿಕಾರಿಗಳ ತಂಡ ರಚಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಕಾಮಸಮುದ್ರದ ಬೆಸ್ಕಾಂ ಕಚೇರಿ ಎದುರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.
ರೈತ ಸಂಘದ ತಾಲೂಕು ಅಧ್ಯಕ್ಷ ಕದರಿನತ್ತ ಅಷ್ಟೋಜಿರಾವ್ ಮಾತನಾಡಿ, ‘ಕಾರ್ಖಾನೆಗಳು ಹಾಗೂ ರಾಜಕೀಯ ಕಾರ್ಯಕ್ರಮಗಳಿಗೆ ತಡೆರಹಿತ ವಿದ್ಯುತ್ ನೀಡಲಾಗುತ್ತಿದೆ. ಆದರೆ, ದೇಶಕ್ಕೆ ಅನ್ನ ನೀಡುವ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಕನಿಷ್ಠ 20 ನಿಮಿಷ ನಿರಂತರ ವಿದ್ಯುತ್ ನೀಡುತ್ತಿಲ್ಲ. ಲೋಡ್‌ಶೆಡ್ಡಿಂಗ್ ನೆಪದಲ್ಲಿ ರೈತರು ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ಬೆಳೆದ ಬೆಳೆಗಳು ಬಿಸಿಲಿನ ತಾಪಕ್ಕೆ ಒಣಗುತ್ತಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
PublicNext
11/09/2026 02:41 pm
LOADING...