ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೀದರ್-ದೆಹಲಿ ನೇರ ರೈಲು ಸೇವೆಗೆ AAP ಮನವಿ

ಬೀದರ್ : ಐತಿಹಾಸಿಕ ನಗರ ಬೀದರ್‌ನಿಂದ ನವದೆಹಲಿಗೆ ನೇರ ರೈಲು ಸೇವೆ ಆರಂಭಿಸುವಂತೆ ಆಮ್ ಆದ್ಮಿ ಪಕ್ಷದ ಬೀದರ್ ಜಿಲ್ಲಾ ಘಟಕ ಕೇಂದ್ರ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಿದೆ.

ಬೀದರ್‌ನಿಂದ ದೆಹಲಿಗೆ ಪ್ರಯಾಣಿಸುವವರು ಸದ್ಯ ಹೈದರಾಬಾದ್ ಸೇರಿದಂತೆ ಇತರ ನಗರಗಳನ್ನು ಅವಲಂಬಿಸಬೇಕಿದೆ. ಇದರಿಂದ ಪ್ರಯಾಣಿಕರು, ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳಿಗೆ ಹೆಚ್ಚಿನ ಸಮಯ ಹಾಗೂ ಅನಾನುಕೂಲ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಬಹುದಿನಗಳ ಬೇಡಿಕೆಯಾದ ಬೀದರ್-ದೆಹಲಿ ನೇರ ರೈಲು ಸೇವೆಯನ್ನು ಕೂಡಲೇ ಮಂಜೂರು ಮಾಡಬೇಕು ಎಂದು ಎಎಪಿ ಒತ್ತಾಯಿಸಿದೆ.

ಇದೇ ವೇಳೆ ಬೀದರ್ ರೈಲ್ವೆ ನಿಲ್ದಾಣದಲ್ಲಿ ಸಾರ್ವಜನಿಕ ಗ್ರಂಥಾಲಯ ಹಾಗೂ ವಾಚನಾಲಯ ಸ್ಥಾಪಿಸುವಂತೆಯೂ ಮನವಿ ಮಾಡಲಾಗಿದೆ. ರೈಲುಗಳಿಗಾಗಿ ಕಾಯುವ ಪ್ರಯಾಣಿಕರು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಪತ್ರಿಕೆ, ನಿಯತಕಾಲಿಕೆ ಹಾಗೂ ಪುಸ್ತಕಗಳ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಲಾಗಿದೆ.

ಮನವಿ ಸಲ್ಲಿಕೆ ವೇಳೆ ಜಿಲ್ಲಾಧ್ಯಕ್ಷ ಸಿದ್ದು ಪುಲಾರಿ, ಎಂ.ಡಿ. ಜಾವಿದ್, ಬಸವರಾಜ ಸ್ವಾಮಿ, ಓಂಕಾರ ಎನ್., ಮೋಹನ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Edited By :
PublicNext

PublicNext

11/09/2026 04:16 pm

Cinque Terre

3.49 K

Cinque Terre

0