ತುಮಕೂರು : ಗುಬ್ಬಿಯಲ್ಲಿ ನಡೆದ ಪ್ರಜಾಸೇವೆ ಆಂದೋಲನದಡಿ ಸಾರ್ವಜನಿಕರಿಂದ ಸ್ವೀಕರಿಸಲಾದ ಅಹವಾಲುಗಳ ವಿಲೇವಾರಿ ಪ್ರಗತಿಯನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲಿಸಿದರು.
ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಒಟ್ಟು 789 ಅರ್ಜಿಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಇಲಾಖಾವಾರು ಪರಿಶೀಲನೆ ನಡೆಸಲಾಯಿತು. ಈ ವೇಳೆ ಅಧಿಕಾರಿಗಳಿಂದ ಅಹವಾಲುಗಳ ಸ್ಥಿತಿ, ಕೈಗೊಂಡಿರುವ ಕ್ರಮಗಳು ಹಾಗೂ ಬಾಕಿ ಇರುವ ಅರ್ಜಿಗಳ ಕುರಿತು ಜಿಲ್ಲಾಧಿಕಾರಿಗಳು ಮಾಹಿತಿ ಪಡೆದರು.
ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ಆಡಳಿತದ ಪ್ರಮುಖ ಕರ್ತವ್ಯವಾಗಿದೆ. ಯಾವುದೇ ಅಹವಾಲು ಅನಗತ್ಯವಾಗಿ ಬಾಕಿ ಉಳಿಯದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ನಿಗದಿತ ಕಾಲಮಿತಿಯೊಳಗೆ ಅರ್ಜಿಗಳನ್ನು ಪರಿಶೀಲಿಸಿ, ಅರ್ಹ ಪ್ರಕರಣಗಳಿಗೆ ಶೀಘ್ರ ಪರಿಹಾರ ಕಲ್ಪಿಸುವಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.
ಪ್ರಜಾಸೇವೆ ಆಂದೋಲನದಡಿ ಸ್ವೀಕರಿಸಲಾದ ಎಲ್ಲ ಅಹವಾಲುಗಳನ್ನು ಪರಿಣಾಮಕಾರಿಯಾಗಿ ವಿಲೇವಾರಿ ಮಾಡುವ ಮೂಲಕ ಸಾರ್ವಜನಿಕರ ವಿಶ್ವಾಸ ಹೆಚ್ಚಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
PublicNext
11/09/2026 05:48 pm
LOADING...