ಮುಲ್ಕಿ: ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿ ಬದಿಯಲ್ಲಿ ಅಮೃತ್ 2.0 ಕುಡಿಯುವ ನೀರಿನ ಯೋಜನೆ ಕಾಮಗಾರಿ ಅವೈಜ್ಞಾನಿಕವಾಗಿ ನಡೆದಿದ್ದು ಹೆದ್ದಾರಿ ರಸ್ತೆ ತುಂಬಾ ಹೊಂಡಗಳು ಉಂಟಾಗಿ ವಾಹನ ಸಂಚಾರ ದುಸ್ತರವಾಗಿ ಪರಿಣಮಿಸಿದೆ. ಹೆದ್ದಾರಿಯನ್ನು ಎಲ್ಲೆಂದರಲ್ಲಿ ಅಗೆದು ಹಾಕಿ ಸೂಕ್ತ ಡಾಂಬರೀಕರಣ ನಡೆಸದೆ ಹೆದ್ದಾರಿಯಲ್ಲಿ ಅನೇಕ ಅಪಘಾತಗಳು ಸಂಭವಿಸಿ ವಾಹನ ಸವಾರರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಬಗ್ಗೆ ಅನೇಕ ಬಾರಿ ಅಮೃತ್ ಕುಡಿಯುವ ನೀರಿನ ಯೋಜನೆ ಅಧಿಕಾರಿಗಳಿಗೆ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಹೆದ್ದಾರಿ ಗುಂಡಿ ಮುಚ್ಚಲು ಶಾಸಕರು ಸೂಚನೆ ನೀಡಿದರೂ ಇದುವರೆಗೂ ಕಾರ್ಯಕರ್ತಗೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ ಅಲ್ಲಲ್ಲಿ ಬ್ಯಾನರ್ ಅಳವಡಿಸುವ ಮೂಲಕ ಸಂಬಂಧಪಟ್ಟ ಅಧಿಕಾರಿಗಳನ್ನು ಎಚ್ಚರಿಸಿ ಪ್ರತಿಭಟನೆ ನಡೆಸಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಸುದೀರ್ ಶೆಟ್ಟಿ ಶಿಮಂತೂರು ಮಾತನಾಡಿ ಭಾರತದ ಪ್ರಧಾನ ಮಂತ್ರಿಗಳ ಮಹತ್ವಕಾಂಕ್ಷಿ ಯೋಜನೆಯಾದ ಅಮೃತ್ 2.0 ಕುಡಿಯುವ ನೀರಿನ ಪೈಪ್ಲೈನ್ ಯೋಜನೆ ಕಾಮಗಾರಿ ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯಲ್ಲಿ ಅವೈಜ್ಞಾನಿಕವಾಗಿ ನಡೆದಿದ್ದು ಪೈಪ್ ಅಳವಡಿಸಲು ತೋಡಿದ ಹೊಂಡಕ್ಕೆ ಡಾಮರೀಕರಣ ನಡೆಸದೆ ಎರ್ರಾಬಿರ್ರಿ ಕಾಮಗಾರಿ ನಡೆಸಿದ್ದಾರೆ..ಕೂಡಲೇ ಅವೈಜ್ಞಾನಿಕ ಕಾಮಗಾರಿ ನಡೆಸಿದ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ ಡಾಂಬರೀಕರಣ ನಡೆಸಿ ಹೊಂಡಗಳನ್ನು ಮುಚ್ಚಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಂಬಂಧಪಟ್ಟ ಇಲಾಖೆಗಳ ಎದುರು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಈ ಸಂದರ್ಭ ಸಾಮಾಜಿಕ ಕಾರ್ಯಕರ್ತರಾದ ಅರುಣ್ ಡಿಸೋಜಾ,ಜೀವನ್ ಶೆಟ್ಟಿ ಅಂಗರಗುಡ್ಡೆ ಮತ್ತಿತರರು ಬ್ಯಾನರ್ ಅಭಿಯಾನದಲ್ಲಿ ಭಾಗವಹಿಸಿದ್ದರು.
PublicNext
11/09/2026 09:45 pm
LOADING...