ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಂಡರಗಿ : ಬಸ್ ನಿಲ್ಲಿಸದ್ದಕ್ಕೆ ರೊಚ್ಚಿಗೆದ್ದ ವಿದ್ಯಾರ್ಥಿಗಳು; ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ

ಮುಂಡರಗಿ : ಬಸ್ ನಿಲ್ಲಿಸದ್ದಕ್ಕೆ ರೊಚ್ಚಿಗೆದ್ದ ತಾಲೂಕಿನ ಬೆಣ್ಣಿಹಳ್ಳಿ ಗ್ರಾಮದ ಬಳಿಯ ಆದರ್ಶ ವಿದ್ಯಾಲಯದ ಮಕ್ಕಳು ಹಾಗೂ ಪಾಲಕರು ಅರಭಾವಿ-ಚಳ್ಳಕೆರೆ ಹೆದ್ದಾರಿ ತಡೆದು ಪ್ರತಿಭಟಿಸಿದರು.

ಆದರ್ಶ ವಿದ್ಯಾಲಯವು ಗ್ರಾಮದಿಂದ ಒಂದು ಕಿಲೋಮೀಟರ್ ದೂರವಿದ್ದು, ಯಾವುದೇ ಬಸ್ ನಿಲ್ಲಿಸದೆ ಇರುವುದರಿಂದ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಈವರೆಗೂ ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗದ ಕಾರಣ ಸಾರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಹೆದ್ದಾರಿ ತಡೆದು ಪ್ರತಿಭಟಿಸಿದ್ದರಿಂದ ಒಂದು ಕಿಲೋಮೀಟರ್‌ವರೆಗೆ ಟ್ರಾಫಿಕ್ ಜಾಮ್ ಉಂಟಾಗಿ ಪ್ರಯಾಣಿಕರು ಪರದಾಡುವಂತಾಯಿತು. ಸ್ಥಳಕ್ಕೆ ಮುಂಡರಗಿ ತಹಶೀಲ್ದಾರ್ ಪಿ.ಎಸ್. ಯರ್ರಿಸ್ವಾಮಿ, ಸಿಪಿಐ ಅಯ್ಯನಗೌಡ ಪಾಟೀಲ ಭೇಟಿ ನೀಡಿ ಮಕ್ಕಳು ಹಾಗೂ ಪಾಲಕರ ಮನವೊಲಿಸಲು ಹರಸಾಹಸ ಪಟ್ಟರು.

Edited By :
PublicNext

PublicNext

11/09/2026 10:15 pm

Cinque Terre

13.66 K

Cinque Terre

0

ಸಂಬಂಧಿತ ಸುದ್ದಿ