ಬಳ್ಳಾರಿ: ಬಿಜೆಪಿಯವರಿಗೆ ಕೊಬ್ಬು ಜಾಸ್ತಿಯಾಗಿತ್ತು, ಅದಕ್ಕೆ ಬಳ್ಳಾರಿ ಚಲೋ ಪಾದಯಾತ್ರೆ ಮಾಡಿದ್ದಾರೆ ಎಂದು ಬಳ್ಳಾರಿ ಗ್ರಾಮಾಂತರ ಶಾಸಕ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ವಾಗ್ದಾಳಿ ನಡೆಸಿದ್ದಾರೆ.
ನಿಖರವಾದ ವಿಷಯವೇ ಇಲ್ಲದೆ ಬಿಜೆಪಿ ಪಾದಯಾತ್ರೆ ನಡೆಸಿದೆ. ತಮ್ಮನ್ನು ಟಾರ್ಗೆಟ್ ಮಾಡಿದ ಹಿನ್ನೆಲೆಯಲ್ಲಿ, ಸರ್ಕಾರಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ತಾವು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾಗಿ ಹೇಳಿದ್ದಾರೆ.
ರಾಜ್ಯದಲ್ಲಿ ನಡೆಯುತ್ತಿರುವ ಇಡಿ ಹಾಗೂ ಸಿಬಿಐ ದಾಳಿಗಳು ರಾಜಕೀಯ ಪ್ರೇರಿತವಾಗಿದ್ದು, ತನಿಖಾ ಸಂಸ್ಥೆಗಳು ಕೇಂದ್ರ ಸರ್ಕಾರದ ಕೈಗೊಂಬೆಗಳಾಗಿವೆ ಎಂದು ಆರೋಪಿಸಿದ್ದಾರೆ.
ಬಳ್ಳಾರಿ ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ಕಾಂಗ್ರೆಸ್‌ನಿಂದ ರಾಜ್ಯ ಮಟ್ಟದ ಸಮಾವೇಶ ನಡೆಸಲಾಗುವುದು. ರಾಜಕೀಯ ಲಾಭಕ್ಕಾಗಿ ಅಲ್ಲ, ಜನರ ಅಭಿವೃದ್ಧಿಯೇ ಕಾಂಗ್ರೆಸ್ ಸರ್ಕಾರದ ಪ್ರಮುಖ ಗುರಿ ಎಂದಿದ್ದಾರೆ.
ಬಳ್ಳಾರಿಯ 10ಕ್ಕೆ 10 ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನೂ ಬಿ. ನಾಗೇಂದ್ರ ವ್ಯಕ್ತಪಡಿಸಿದ್ದಾರೆ.
ಹೊನ್ನೂರಸ್ವಾಮಿ ಕೆ. ಟಿ. ಪಬ್ಲಿಕ್ ನೆಕ್ಸ್ಟ್, ಬಳ್ಳಾರಿ.
PublicNext
12/09/2026 05:34 pm
LOADING...