ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ಪ್ರತಿಭಟನೆ

ಮಡಿಕೇರಿ: ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಲ್ಲಂಘಿಸಿ ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಾ ಜಾತಿ ಪದ್ಧತಿಯ ವಿಷಬೀಜವನ್ನು ಬಿತ್ತುತ್ತಿರುವ ಮನುವಾದಿಗಳ ವಿರುದ್ಧ ಜಾತ್ಯಾತೀತ ಶಕ್ತಿಗಳು ಒಂದಾಗಿ ರಾಷ್ಟçದ ಒಳಿತಿಗಾಗಿ ಹೋರಾಡಬೇಕಾಗಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್ ಅವರು ಕರೆ ನೀಡಿದ್ದಾರೆ.

ಉತ್ತರಖಂಡ್ ರಾಜ್ಯದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣಗೊಳಿಸಿದ ಪ್ರಕರಣವನ್ನು ಖಂಡಿಸಿ ಹಾಗೂ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರ ಮೇಲೆ ಎಫ್.ಐ.ಆರ್ ದಾಖಲಿಸಿರುವುದನ್ನು ವಿರೋಧಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ, ಜಿಲ್ಲೆಯ ಆರು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ, ಮಡಿಕೇರಿ ಬ್ಲಾಕ್ ಮತ್ತು ನಗರ ಕಾಂಗ್ರೆಸ್ ಸಮಿತಿಯ ವತಿಯಿಂದ ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.

ಬಿಜೆಪಿಯ ದ್ವೇಷ ರಾಜಕಾರಣವನ್ನು ತಿರಸ್ಕರಿಸಿ ದೇಶದ ಏಕತೆಗಾಗಿ ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕಾಗಿದೆ. ಬಿಜೆಪಿಯಿಂದ ಶೋಷಿತ ಜನಾಂಗಗಳ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ಜನ ವಿರೋಧಿ ಮತ್ತು ಸಂವಿಧಾನ ವಿರೋಧಿ ಕೃತ್ಯಗಳ ವಿರುದ್ಧ ನಾವು ಧÀ್ವನಿ ಎತ್ತಿ ಮಾತನಾಡಬೇಕಾಗಿದೆ ಎಂದು ಟಿ.ಪಿ.ರಮೇಶ್ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಉಪಾಧ್ಯಕ್ಷ ಮೋಹನ್ ಮೌರ್ಯ ಅವರು ಮಾತನಾಡಿ ದೇಶದಲ್ಲಿ ಜಾತಿ ಹೆಸರಿನಲ್ಲಿ ನಡೆಯುತ್ತಿರುವ ಇಂತಹ ಕುಕೃತ್ಯಗಳನ್ನು ಖಂಡಿಸಬೇಕಾಗಿದೆ. ದೇಶದಲ್ಲಿ ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರ ಸಂವಿಧಾನ ಗಟ್ಟಿಯಾಗಿ ನೆಲೆ ನಿಂತಿದೆ. ಇದರ ನಡುವೆಯೂ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣಗೊಳಿಸಿದ ಪ್ರಕರಣ ಸಂವಿಧಾನ ವಿರೋಧಿಯಾಗಿದೆ. ಕಾಂಗ್ರೆಸ್ ನಾಯಕರ ವಿರುದ್ಧ ಸುಳ್ಳು ಮೊಕದ್ದಮೆ ದಾಖಲು ಮಾಡುವ ಸಂಘ ಪರಿವಾರದ ನಡೆಯನ್ನು ನಾವು ಪ್ರಬಲವಾಗಿ ಖಂಡಿಸಬೇಕು ಎಂದು ಕರೆ ನೀಡಿದರು.

Edited By : PublicNext Desk
Kshetra Samachara

Kshetra Samachara

13/09/2026 06:47 am

Cinque Terre

260

Cinque Terre

0

ಸಂಬಂಧಿತ ಸುದ್ದಿ