ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ: ಬೇಲೂರಿನಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

ಹಾಸನ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮ ಬೇಲೂರಿನ ಜೆ.ಪಿ. ನಗರದ ಆರ್.ವಿ. ಕನ್ವೆನ್ಷನ್ ಹಾಲ್‌ನಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮ ಆಯೋಜಿಸಿ ಜನರಲ್ಲಿ ಶ್ರದ್ಧೆ, ಭಕ್ತಿ ಹಾಗೂ ಧಾರ್ಮಿಕ ಚಿಂತನೆ ಬೆಳೆಸುತ್ತಿರುವುದು ಸಂತಸದ ವಿಚಾರ. ಇಂತಹ ಕಾರ್ಯಕ್ರಮಗಳು ಗ್ರಾಮೀಣ ಪ್ರದೇಶದ ಪ್ರತಿ ಹಳ್ಳಿಯಲ್ಲೂ ನಡೆಯುವುದರಿಂದ ಸಮಾಜದಲ್ಲಿ ಶಾಂತಿ, ಸಮೃದ್ಧಿ ಹಾಗೂ ಸೌಹಾರ್ದ ವಾತಾವರಣ ನಿರ್ಮಾಣವಾಗಲು ಸಹಕಾರಿಯಾಗಲಿದೆ ಎಂದು ಗಣ್ಯರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಬೇಲೂರು ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಕೆ. ಸುರೇಶ್, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷ ಮಂಜುನಾಥ್ ಗೌಡ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೈಸೂರು ಪ್ರಾದೇಶಿಕ ನಿರ್ದೇಶಕ ಯೋಗೀಶ್, ಪ್ರಾಥಮಿಕ ಕೃಷಿ ಸಹಕಾರ ಸಂಘ ತೊಳಲು ಅಧ್ಯಕ್ಷ ಎನ್.ಎ. ವೆಂಕಟೇಶ್, ಮಳಲಿಕೆರೆ ಕೆರೆ ಸಮಿತಿ ಅಧ್ಯಕ್ಷ ಧರ್ಮಯ್ಯ, ಗ್ರಾಮ ಪಂಚಾಯಿತಿ ತೊಳಲು ನಿಕಟಪೂರ್ವ ಸದಸ್ಯೆ ಗೀತಾ ಗಂಗರಾಜ್, ಯೋಜನೆಯ ಹಾಸನ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಬೇಲೂರು ಯೋಜನಾಧಿಕಾರಿ ಮಂಜುಳಾ, ಕೃಷಿ ಮೇಲ್ವಿಚಾರಕ ನಾಗರಾಜ್ ಆರ್., ಚೀಕನಹಳ್ಳಿ ವಲಯದ ಮೇಲ್ವಿಚಾರಕಿ ಸವಿತಾ, ಸೇವಾಪ್ರತಿನಿಧಿ ಪ್ರತಿಭಾ, ಶಿವಣ್ಣ, ಪ್ರತಿಮಾ, ರೂಪ, ರಜನಿ, ಭಾಗ್ಯ ಸೇರಿದಂತೆ ಪ್ರಗತಿಬಂಧು ಸ್ವಸಹಾಯ ಸಂಘಗಳ ಸದಸ್ಯರು, ದೇವಾಲಯ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.

Edited By :
Kshetra Samachara

Kshetra Samachara

13/09/2026 12:47 pm

Cinque Terre

1.24 K

Cinque Terre

0