ಶಿವಮೊಗ್ಗ: ಶಾಲಾ ರಜೆ ಹಿನ್ನೆಲೆಯಲ್ಲಿ ಸ್ನೇಹಿತರೊಂದಿಗೆ ಕೆರೆಗೆ ಈಜಲು ತೆರಳಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ದುರಂತವಾಗಿ ಕೊನೆಯುಸಿರೆಳೆದಿರುವ ಘಟನೆ ಶಿವಮೊಗ್ಗ ನಗರದ ಸೋಮಿನಕೊಪ್ಪ ದೊಡ್ಡ ಕೆರೆಯಲ್ಲಿ ನಡೆದಿದೆ.
ಸಮ್ಮಿ ಉಲ್ಲಾ ಎಂಬುವರ 15 ವರ್ಷದ ಮಗ ಬೃಹಾನ್ ಮೃತಪಟ್ಟ ವಿದ್ಯಾರ್ಥಿ. ಈತ ಪ್ರಸ್ತುತ ಎಸ್.ಎಸ್.ಎಲ್.ಸಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಶಾಲೆಗೆ ರಜೆ ಇದ್ದಿದ್ದರಿಂದ ಬೃಹಾನ್ ತನ್ನ ಸ್ನೇಹಿತರೊಡನೆ ಸೋಮಿನಕೊಪ್ಪದ ದೊಡ್ಡ ಕೆರೆಗೆ ಈಜಾಡಲು ತೆರಳಿದ್ದನು. ಈ ವೇಳೆ ಈಜುವಾಗ ನೀರಿನ ಆಳ ಹಾಗೂ ರಭಸ ತಿಳಿಯದೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾನೆ ಎನ್ನಲಾಗಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳ ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಕೆರೆಯಲ್ಲಿ ಬಾಲಕನ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ವಿನೋಬನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಣ್ಣೆದುರೇ ಮಗ ನೀರುಪಾಲಾಗಿದ್ದನ್ನು ಕಂಡು ಕುಟುಂಬಸ್ಥರು ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಘಟನೆ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
PublicNext
13/09/2026 02:42 pm
LOADING...