ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ಹಲವರಿಗೆ ಗಾಯ!

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ಕೆಎಸ್ಸಾರ್ಟಿಸಿ (KSRTC) ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಲವರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಧರ್ಮಸ್ಥಳದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಬಸ್ ಮುಖಾಮುಖಿಯಾಗಿ ಢಿಕ್ಕಿ ಹೊಡೆದಿವೆ.

ಅಪಘಾತದ ತೀವ್ರತೆಗೆ ಬಸ್ಸಿನ ಮುಂಭಾಗ ಹಾಗೂ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿವೆ. ಈ ಅಪಘಾತದಲ್ಲಿ ಬಸ್ಸಿನಲ್ಲಿದ್ದ ಮೂವರು ಪ್ರಯಾಣಿಕರು ಹಾಗೂ ಕಾರಿನಲ್ಲಿದ್ದ ಹಲವರು ಗಾಯಗೊಂಡಿರುವುದಾಗಿ ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ. ಘಟನೆ ನಡೆದ ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಹಾಗೂ ಪೊಲೀಸರು, ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Edited By : PublicNext Desk
Kshetra Samachara

Kshetra Samachara

13/09/2026 06:08 pm

Cinque Terre

1.54 K

Cinque Terre

0

ಸಂಬಂಧಿತ ಸುದ್ದಿ