ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿರಸಿ: ಸೊಂದಾ ಸ್ವರ್ಣವಲ್ಲಿ ಮಠಕ್ಕೆ ಶಾಸಕ ಭೀಮಣ್ಣ ನಾಯ್ಕ ಭೇಟಿ

ಶಿರಸಿ: ತಾಲೂಕಿನ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ, ಚಾತುರ್ಮಾಸ್ಯ ವ್ರತದಲ್ಲಿರುವ ಶ್ರೀಗಳ ದರ್ಶನ ಪಡೆದು ಶಾಸಕ ಭೀಮಣ್ಣ ಟಿ. ನಾಯ್ಕ್ ಗುರುವಂದನೆ ಸಲ್ಲಿಸಿದರು.

ಶಿರಸಿಯ ಸ್ವರ್ಣವಲ್ಲೀ ಮಠಕ್ಕೆ ಭೇಟಿ ನೀಡಿದ ಶಾಸಕರು, ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳು ಹಾಗೂ ಶ್ರೀ ಆನಂದ ಬೋಧೇಂದ್ರ ಸ್ವಾಮಿಗಳವರ ಆಶೀರ್ವಾದ ಪಡೆದರು. ಹಾಗೂ ಶ್ರೀ ವಾದಿರಾಜ ಮಠಕ್ಕೂ ಭೇಟಿ ನೀಡಿ, ಸೋಂದಾ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರ ಚಾತುರ್ಮಾಸ್ಯ ಕಾರ್ಯಕ್ರಮದ ನಿಮಿತ್ತ ಶ್ರೀಗಳಿಗೆ ಗುರುವಂದನೆ ನೆರವೇರಿಸಿ, ನಾಡಿನ ಕ್ಷೇಮಾಭಿವೃದ್ಧಿಗಾಗಿ ಪ್ರಾರ್ಥಿಸಿದರು.

ಬಳಿಕ ಶಿರಸಿಯ ಶ್ರೀ ಜೈನ ಮಠಕ್ಕೆ ಭೇಟಿ ನೀಡಿದ ಅವರು, ಶ್ರೀ ಕೂಷ್ಮಾಂಡಿನೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಶ್ರೀಗಳ ಆಶೀರ್ವಾದ ಪಡೆದುಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಭೀಮಣ್ಣ ನಾಯ್ಕ, "ಶ್ರೀಗಳ ಚಾತುರ್ಮಾಸ್ಯ ವ್ರತದ ಈ ಪವಿತ್ರ ಸಮಯದಲ್ಲಿ ಗುರುಗಳ ದರ್ಶನ ಪಡೆದು ಆಶೀರ್ವಾದ ಪಡೆದಿರುವುದು ಮನಸ್ಸಿಗೆ ಸೌಹಾರ್ದತೆ ಮತ್ತು ಧನ್ಯತೆಯ ಭಾವ ಮೂಡಿಸಿದೆ. ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಜನರ ಕಲ್ಯಾಣಕ್ಕಾಗಿ ಶ್ರೀಗಳ ಆಶೀರ್ವಾದ ಸದಾ ನಮ್ಮ ಮೇಲಿರಲಿ ಎಂದು ಪ್ರಾರ್ಥಿಸಿದ್ದೇನೆ" ಎಂದರು.

ಈ ಸಂದರ್ಭದಲ್ಲಿ ಮಠದ ಪ್ರಮುಖರು, ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

13/09/2026 06:54 pm

Cinque Terre

1.36 K

Cinque Terre

0

ಸಂಬಂಧಿತ ಸುದ್ದಿ