ತಾಳಿಕೋಟಿ, ಸೆ.13: ಮುದ್ದೇಬಿಹಾಳ ಮತ್ತು ತಾಳಿಕೋಟಿ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸುವಲ್ಲಿ ಶಾಸಕ ಅಪ್ಪಾಜಿ ನಾಡಗೌಡರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಆರೋಪಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬರ ಘೋಷಣೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಹಾಗೂ ಸ್ಥಳೀಯ ಶಾಸಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಬರ ಘೋಷಣೆಯಾಗದಿದ್ದರೆ ತಾವೇ ಧರಣಿ ನಡೆಸುವುದಾಗಿ ಈ ಹಿಂದೆ ಶಾಸಕ ಅಪ್ಪಾಜಿ ನಾಡಗೌಡರು ಹೇಳಿದ್ದರು. ಇದೀಗ ಅವರು ನೀಡಿದ ಮಾತಿನಂತೆ ನಡೆದುಕೊಳ್ಳಬೇಕು. ಇದುವರೆಗೆ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲೂಕುಗಳನ್ನು ಸರ್ಕಾರ ಬರಪೀಡಿತ ಪ್ರದೇಶಗಳೆಂದು ಘೋಷಿಸಿಲ್ಲ. ರೈತರ ಹಿತದೃಷ್ಟಿಯಿಂದ ಕೂಡಲೇ ಎರಡೂ ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಬೇಕು ಎಂದು ಒತ್ತಾಯಿಸಿದರು
PublicNext
13/09/2026 08:31 pm
LOADING...