ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬರ ಪರಿಸ್ಥಿತಿ ಬಗ್ಗೆ ಸರ್ಕಾರಕ್ಕೆ ಹಲವು ಬಾರಿ ಮನವಿ; ಔರಾದ್‌ನಲ್ಲಿ ಬಿಜೆಪಿ ಪ್ರತಿಭಟನೆಗೆ ಸಜ್ಜು

ಬೀದರ್ - ಬರ ಘೋಷಣೆಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಬಿಜೆಪಿ ಹೋರಾಟಕ್ಕೆ ಸಜ್ಜಾಗಿದೆ. ಬೀದರ್‌ ಜಿಲ್ಲೆಯ ಔರಾದ್ ಹಾಗೂ ಕಮಲನಗರ ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸುವಂತೆ ಆಗ್ರಹಿಸಿ ಸೆಪ್ಟೆಂಬರ್ 19ರಂದು ಔರಾದ್ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಬಿಜೆಪಿ ಔರಾದ್ ಮಂಡಲ ತೀರ್ಮಾನಿಸಿದೆ. ಶಾಸಕ ಪ್ರಭು ಚೌಹಾಣ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರತಿಭಟನೆಯ ರೂಪುರೇಷೆ ಸಿದ್ಧಪಡಿಸಲಾಗಿದ್ದು, ಸೆಪ್ಟೆಂಬರ್ 19ರಂದು ಅಮರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿ ಶಾಸಕ ಪ್ರಭು ಚೌಹಾಣ್ ಪ್ರತಿಭಟನೆಗೆ ಚಾಲನೆ ನೀಡಲಿದ್ದಾರೆ. ಬಳಿಕ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ರೈತರೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಎಪಿಎಂಸಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಈ ಕುರಿತು ಶಾಸಕ ಚೌಹಾಣ್ ಮಾತನಾಡಿ ಸರ್ಕಾರದ ವಿರುದ್ಧ ಶಾಸಕರ ವಾಗ್ದಾಳಿ ನಡೆಸಿದ್ರು.ಔರಾದ್ ಹಾಗೂ ಕಮಲನಗರ ತಾಲ್ಲೂಕುಗಳ ಬರ ಪರಿಸ್ಥಿತಿ ಕುರಿತು ಹಲವು ಬಾರಿ ಸರ್ಕಾರದ ಗಮನಕ್ಕೆ ತಂದರೂ ಯಾವುದೇಪ್ರಯೋಜನವಾಗಿಲ್ಲ ಎಂದು ಆರೋಪಿಸಿದ್ರು...

Edited By :
PublicNext

PublicNext

14/09/2026 01:40 pm

Cinque Terre

5.2 K

Cinque Terre

0

ಸಂಬಂಧಿತ ಸುದ್ದಿ