ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗುಂಡು ಹಾರಿಸಿಕೊಂಡು ವೃದ್ಧ ದಂಪತಿ ಆತ್ಮಹತ್ಯೆ

ಸೋಮವಾರಪೇಟೆ : ಕೊಡಗು ಜಿಲ್ಲೆಯಲ್ಲಿ ಮತ್ತೆ ಗುಂಡಿನ ಸದ್ದು ಮಾರ್ಧನಿಸಿದೆ. ಗುಂಡು ಹಾರಿಸಿಕೊಂಡು ವೃದ್ಧ ದಂಪತಿ ಇಬ್ಬರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಂಬಾರಗಡಿಗೆ ಗ್ರಾಮದಲ್ಲಿ ನಡೆದಿದೆ.

ಕನ್ನಿಕಂಡ ಕುಟುಂಬದ ಸುಬ್ಬಯ್ಯ (74) ಹಾಗೂ ಅವರ ಪತ್ನಿ ಭೋಜಮ್ಮ (72) ಮೃತ ದುರ್ದೈವಿಗಳಾಗಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದು, ದಂಪತಿ ಆತ್ಮಹತ್ಯೆ ಮಾಡಿಕೊಳ್ಳಲು ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

Edited By : PublicNext Desk
PublicNext

PublicNext

15/09/2026 06:48 am

Cinque Terre

1.81 K

Cinque Terre

0

ಸಂಬಂಧಿತ ಸುದ್ದಿ