ಮೈಸೂರು : ಜಮೀನಿನ ಕೆಲಸಕ್ಕೆ ಬಂದಿಲ್ಲವೆಂಬ ಕಾರಣಕ್ಕೆ ಆದಿವಾಸಿ ಮಹಿಳೆಯೊಬ್ಬರ ಮೇಲೆ ಗಂಭೀರವಾಗಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹಲ್ಲೆಯಿಂದ ಅಸ್ವಸ್ಥಗೊಂಡ ಮಹಿಳೆ ರಾತ್ರಿ ವೇಳೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ಧಾವಿಸಿರುವ ಘಟನೆ ನಂಜನಗೂಡು ತಾಲ್ಲೂಕಿನಲ್ಲಿ ನಡೆದಿದೆ.
ನಂಜನಗೂಡು ತಾಲ್ಲೂಕಿನ ಬಂಕಹಳ್ಳಿ ಗ್ರಾಮದ ಗೋಪಮ್ಮ @ ಗೌರಮ್ಮ (52) ಹಲ್ಲೆಗೊಳಗಾದ ಆದಿವಾಸಿ ಮಹಿಳೆ ಎಂದು ತಿಳಿದುಬಂದಿದೆ. ಜಮೀನಿನ ಕೆಲಸಕ್ಕೆ ಬಂದಿಲ್ಲವೆಂಬ ಕಾರಣಕ್ಕೆ ಮಹಿಳೆಯ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಹಲ್ಲೆಯಿಂದ ಅಸ್ವಸ್ಥಗೊಂಡ ಗೋಪಮ್ಮ ಅವರು ಚಿಕಿತ್ಸೆಗಾಗಿ ಹೆಡಿಯಾಲದ ಖಾಸಗಿ ಆಸ್ಪತ್ರೆಗೆ ರಾತ್ರಿ ವೇಳೆ ತೆರಳಿದ್ದರು ಎನ್ನಲಾಗಿದೆ.
ಆಸ್ಪತ್ರೆಗೆ ತೆರಳಿದ ಸಂದರ್ಭದಲ್ಲಿ ಕೆಲಕಾಲ ಫುಟ್‌ಪಾತ್‌ನಲ್ಲೇ ಅಸ್ವಸ್ಥರಾಗಿ ಬಿದ್ದಿದ್ದ ಮಹಿಳೆಯನ್ನು ಬಳಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಸದ್ಯ ಗೋಪಮ್ಮ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೆಚ್.ಡಿ.ಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎಂದು ತಿಳಿದುಬಂದಿದ್ದು, ಮಹಿಳೆಯ ಮೇಲೆ ಹಲ್ಲೆ ನಡೆಸಿದ ಆರೋಪದ ಕುರಿತು ಪೊಲೀಸರು ತನಿಖೆ ನಡೆಸಬೇಕಿದೆ. ಆದಿವಾಸಿ ಮಹಿಳೆಯ ಮೇಲೆ ಹಲ್ಲೆ ನಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬಂದಿದೆ.
PublicNext
15/09/2026 02:17 pm
LOADING...