ವಿಜಯಪುರ : ಬಿಜೆಪಿಯವರು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ನಾಯಕರನ್ನು ಗುರಿಯಾಗಿಸಿಕೊಂಡು ಇ.ಡಿ., ಆದಾಯ ತೆರಿಗೆ ಸೇರಿದಂತೆ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಆರೋಪಿಸಿದರು.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿ ಸ್ಥಾನದ ಕುರಿತು ತಮ್ಮ ಭಾವನೆಗಳನ್ನು ಬಹಿರಂಗವಾಗಿ ಹೇಳಿದ್ದಾರೆ. ನಾನು ಮೊನ್ನೆ ಅವರನ್ನು ಭೇಟಿಯಾಗಿದ್ದೆ. ಆ ಸಂದರ್ಭದಲ್ಲಿ ಅವರು ತಮ್ಮೊಂದಿಗೆ ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ ಎಂದರು.
ದೇಶದಲ್ಲಿ ನಡೆದಿರುವ ಬಹುತೇಕ ದಾಳಿಗಳು ವಿರೋಧ ಪಕ್ಷಗಳ ನಾಯಕರ ಮೇಲೆಯೇ ನಡೆದಿವೆ. ಬಿಜೆಪಿ ನಾಯಕರ ಮೇಲೆ ಇ.ಡಿ. ದಾಳಿಗಳು ನಡೆದಿರುವುದು ಕಡಿಮೆ ಎಂದು ಅವರು ಟೀಕಿಸಿದರು.
‘ರೇಡ್ ಮಾಡಿ, ಹೆದರಿಸಿ ಬಿಜೆಪಿಗೆ ಸೇರ್ಪಡೆ’
ತನಿಖಾ ಸಂಸ್ಥೆಗಳಿಂದ ದಾಳಿ ನಡೆಸಿ, ನಾಯಕರನ್ನು ಹೆದರಿಸಿ ಬಳಿಕ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಲಾಗುತ್ತಿದೆ. ಇದು ವಾಷಿಂಗ್ ಮೆಷಿನ್‌ಗೆ ಹಾಕಿದಂತೆ ಆಗಿದೆ ಎಂದು ಎಂ.ಬಿ. ಪಾಟೀಲ ವ್ಯಂಗ್ಯವಾಡಿದರು.
ಅಜಿತ್ ಪವಾರ್, ಅಸ್ಸಾಂ ಮುಖ್ಯಮಂತ್ರಿ ಹಾಗೂ ಅಶೋಕ್ ಚವ್ಹಾಣ್ ಸೇರಿದಂತೆ ಹಲವು ನಾಯಕರ ಉದಾಹರಣೆಗಳನ್ನು ನೀಡಿದ ಅವರು, ದಾಳಿ ನಡೆಸಿ ನಂತರ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ರಾಜಕೀಯ ನಡೆಯುತ್ತಿದೆ ಎಂದು ಆರೋಪಿಸಿದರು.
PublicNext
15/09/2026 04:37 pm
LOADING...