ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲ್ಯಾಣ ಕರ್ನಾಟಕ ಉತ್ಸವಕ್ಕೂ ಮುನ್ನವೇ ಭುಗಿಲೆದ್ದ ಪ್ರತ್ಯೇಕ ರಾಜ್ಯದ ಕೂಗು: ಯಾದಗಿರಿಯಲ್ಲಿ ಉಗ್ರ ಹೋರಾಟದ ಎಚ್ಚರಿಕೆ!

ಯಾದಗಿರಿ: ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಇದರ ಬೆನ್ನಲ್ಲೇ ಪ್ರತ್ಯೇಕ ರಾಜ್ಯದ ಕೂಗು ಮತ್ತೆ ಜೋರಾಗಿದೆ! ಸರ್ಕಾರದ ನಿರ್ಲಕ್ಷ್ಯ ಹಾಗೂ ಬರಪೀಡಿತ ತಾಲೂಕು ಘೋಷಣೆಯಲ್ಲಿನ ತಾರತಮ್ಯದ ವಿರುದ್ಧ ಹೋರಾಟಗಾರರು ಕೆಂಡಾಮಂಡಲವಾಗಿದ್ದಾರೆ. ಅಷ್ಟೇ ಅಲ್ಲದೆ, ಬೇಡಿಕೆ ಈಡೇರದಿದ್ದರೆ ಉತ್ಸವದ ದಿನವೇ ಪ್ರತ್ಯೇಕ ರಾಜ್ಯದ ಧ್ವಜ ಹಾರಿಸುವ ಗಂಭೀರ ಎಚ್ಚರಿಕೆ ನೀಡಿದ್ದಾರೆ.

ಸೆಪ್ಟೆಂಬರ್ 17 ಕಲ್ಯಾಣ ಕರ್ನಾಟಕ ಉತ್ಸವದ ದಿನ! ಆದರೆ, ಉತ್ಸವದ ಸಂಭ್ರಮಕ್ಕೂ ಮುನ್ನವೇ ಯಾದಗಿರಿಯಲ್ಲಿ ಪ್ರತ್ಯೇಕ ರಾಜ್ಯದ ಕೂಗು ಮೊಳಗಿದೆ. ಕಲ್ಯಾಣ ಕರ್ನಾಟಕ ಭಾಗವನ್ನು ಸರ್ಕಾರ ನಿರಂತರವಾಗಿ ನಿರ್ಲಕ್ಷಿಸುತ್ತಿದೆ ಹಾಗೂ ಮಲತಾಯಿ ಧೋರಣೆ ತಾಳುತ್ತಿದೆ ಎಂಬುದು ಹೋರಾಟಗಾರರ ಪ್ರಮುಖ ಆರೋಪವಾಗಿದೆ.

ಇದಕ್ಕೆ ಮತ್ತಷ್ಟು ಕಿಚ್ಚು ಹಚ್ಚಿರುವುದು ಬರಪೀಡಿತ ತಾಲೂಕುಗಳ ಘೋಷಣೆಯಲ್ಲಿನ ತಾರತಮ್ಯ! ಯಾದಗಿರಿ ಜಿಲ್ಲೆಯ ಗುರುಮಠಕಲ್, ಸುರಪುರ ಸೇರಿದಂತೆ ಎಲ್ಲಾ ತಾಲೂಕುಗಳನ್ನೂ ಬರಪೀಡಿತ ಪಟ್ಟಿಗೆ ಸೇರಿಸಬೇಕು ಎಂಬುದು ಹೋರಾಟಗಾರರ ಬಲವಾದ ಆಗ್ರಹವಾಗಿದೆ.

ಸೆಪ್ಟೆಂಬರ್ 16ರೊಳಗೆ ಬರ ಘೋಷಣೆ ಮಾಡದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇಷ್ಟಕ್ಕೆ ನಿಲ್ಲದ ಹೋರಾಟಗಾರರು, ಸೆಪ್ಟೆಂಬರ್ 17ರಂದೇ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯದ ಧ್ವಜ ಹಾರಿಸುತ್ತೇವೆ ಎಂದು ಸರ್ಕಾರಕ್ಕೆ ನೇರ ಎಚ್ಚರಿಕೆ ರವದಿಸಿದ್ದಾರೆ.

Edited By :
PublicNext

PublicNext

15/09/2026 05:30 pm

Cinque Terre

7.42 K

Cinque Terre

1

ಸಂಬಂಧಿತ ಸುದ್ದಿ