ಕೊಪ್ಪಳ : ಕೊಪ್ಪಳ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ ಜೆಡಿಎಸ್ ಜಿಲ್ಲಾಧ್ಯಕ್ಷ ಸಿ.ವಿ. ಚಂದ್ರಶೇಖರ್ ನೇತೃತ್ವದಲ್ಲಿ ಪಾದಯಾತ್ರೆ ಆರಂಭವಾಗಿದೆ. ಕೊಪ್ಪಳ ತಾಲೂಕಿನ ಘಟ್ರೆಡ್ಡಿಹಾಳದಿಂದ ಪಾದಯಾತ್ರೆ ಆರಂಭವಾಯಿತು. ಕೊಪ್ಪಳ ಜಿಲ್ಲಾ ಜೆಡಿಎಸ್ ಘಟಕದ ವತಿಯಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.
ಜೆಡಿಎಸ್ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಪಾದಯಾತ್ರೆ ಹಮ್ಮಿಕೊಂಡಿದೆ. ಬಳ್ಳಾರಿ ಚಲೋ ಪಾದಯಾತ್ರೆ ಮಾದರಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ನೂರಾರು ಜೆಡಿಎಸ್ ಕಾರ್ಯಕರ್ತರು ಭಾಗವಹಿಸಿದ್ದು, ಎತ್ತಿನ ಗಾಡಿಗಳೊಂದಿಗೆ ಪಾದಯಾತ್ರೆ ಆರಂಭಿಸಿದರು.
ಗಂಗಾವತಿ, ಕುಕನೂರು, ಕೊಪ್ಪಳ ಜಿಲ್ಲೆಯ ಕನಕಗಿರಿ ಮತ್ತು ಕಾರಟಗಿ ತಾಲೂಕುಗಳನ್ನು ಈಗಾಗಲೇ ಬರಪೀಡಿತ ಎಂದು ಘೋಷಿಸಲಾಗಿದೆ. ತೀವ್ರ ಮಳೆ ಕೊರತೆ ಹಿನ್ನೆಲೆಯಲ್ಲಿ ಕೊಪ್ಪಳ ತಾಲೂಕನ್ನೂ ಬರಪೀಡಿತ ಎಂದು ಘೋಷಿಸಬೇಕು ಎಂದು ಜೆಡಿಎಸ್ ಒತ್ತಾಯಿಸುತ್ತಿದೆ.
ಬರ ಪಟ್ಟಿಯಿಂದ ಕೊಪ್ಪಳ ತಾಲೂಕನ್ನು ಕೈಬಿಟ್ಟಿರುವ ವಿಚಾರವಾಗಿ ಅಳವಂಡಿ ಗ್ರಾಮದಲ್ಲಿ ಮಾತನಾಡಿದ ಶ್ರೀ ಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ರಾಜ್ಯಾದ್ಯಂತ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಜೆಡಿಎಸ್ ಮುಖಂಡ ಸಿ.ವಿ. ಚಂದ್ರಶೇಖರ್ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಗುತ್ತಿದೆ ಎಂದರು.
ರೈತರಿಗೆ ಅನ್ಯಾಯವಾದಾಗ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಒಟ್ಟಾಗಿ ರೈತರ ಪರ ಧ್ವನಿ ಎತ್ತಬೇಕು. ರಾಜ್ಯ ಭೀಕರ ಬರ ಎದುರಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಸಿ.ವಿ. ಚಂದ್ರಶೇಖರ್ ಜೆಡಿಎಸ್ ಪರವಾಗಿ ರೈತರ ಪರ ಈ ಪಾದಯಾತ್ರೆ ನಡೆಸುತ್ತಿದ್ದಾರೆ. ಪಾದಯಾತ್ರೆಯಲ್ಲಿ ಜೆಡಿಎಸ್‌ನ ಹಲವು ಹಿರಿಯ ಮುಖಂಡರು ಭಾಗವಹಿಸುತ್ತಿರುವುದು ಸಂತಸದ ವಿಚಾರ. ರೈತರು ನೆಮ್ಮದಿಯಿಂದ ಇದ್ದರೆ ಇಡೀ ದೇಶವೇ ಸುಖವಾಗಿರುತ್ತದೆ. ನಾನು ಈ ಪಾದಯಾತ್ರೆಯನ್ನು ಆಶೀರ್ವದಿಸುತ್ತೇನೆ ಮತ್ತು ಇದು ಉತ್ತಮ ಯಶಸ್ಸು ಕಾಣಲಿ ಎಂದು ಶ್ರೀಗಳು ಹೇಳಿದರು.
ಪಾದಯಾತ್ರೆ ವೇಳೆ ಮಾಜಿ ಸಚಿವ ಎಂ.ಪಿ. ನಾಡಗೌಡ ಸೇರಿದಂತೆ ಪಕ್ಷದ ಮುಖಂಡರು ಭಾಗವಹಿಸಿದ್ದರು.
PublicNext
15/09/2026 05:43 pm
LOADING...