ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಶಾಸಕ ಕೋನರಡ್ಡಿ ಚಾಲನೆ

ಅಣ್ಣಿಗೇರಿ : ನಗರದ ಅಮೃತೇಶ್ವರ ಶಾಲಾ ಸಭಾಭವನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಶಿಕ್ಷಣ ಇಲಾಖೆ, ಕಾನೂನು ಸೇವಾ ಆಯೋಗ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಣ್ಣಿಗೇರಿ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮಕ್ಕೆ ಶಾಸಕ ಕೋನರಡ್ಡಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನದ ಆಶಯಗಳು ಹಾಗೂ ನಾಗರಿಕರ ಹಕ್ಕು ಮತ್ತು ಕರ್ತವ್ಯಗಳ ಕುರಿತು ಜಾಗೃತಿ ಮೂಡಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಪ್ರಜಾಪ್ರಭುತ್ವದ ಬಲವರ್ಧನೆಗೆ ಯುವಜನತೆ ಹಾಗೂ ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆ ಅತ್ಯಂತ ಮಹತ್ವದ್ದಾಗಿದೆ. ಪ್ರಜಾಪ್ರಭುತ್ವದ ಭದ್ರ ಬುನಾದಿಯಿಂದಲೇ ಈ ದೇಶ ಸುಭದ್ರವಾಗಿದೆ ಎಂದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರಿಯದರ್ಶಿನಿ ಹಿರೇಮಠ, ಪುರಸಭೆಯ ಮುಖ್ಯಾಧಿಕಾರಿ ವಾಯ್.ಜಿ. ಗದ್ದಿಗೌಡರ, ಪ್ರಾಚಾರ್ಯ ಎಂ.ಆರ್. ಮುಂಡರಗಿ, ಉಪ ಪ್ರಾಚಾರ್ಯ ಯು.ಎಸ್. ಗೌಡರ, ಆರಕ್ಷಕ ಠಾಣಾ ಅಧಿಕಾರಿ ದೇವದಾನಮ್ಮ ಟಿ.ಎಚ್., ಕಿರಿಯ ಅಭಿಯಂತರ ಕೆ.ಎಸ್. ಪಾಟೀಲ, ಸಕ್ರೆಪ್ಪ ಪಲ್ಲೆದ, ವಿರೂಪಾಕ್ಷಪ್ಪ ನವಲಗುಂದ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

15/09/2026 06:23 pm

Cinque Terre

12.23 K

Cinque Terre

0

ಸಂಬಂಧಿತ ಸುದ್ದಿ