ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬರ ಘೋಷಣೆಗೆ ಆಗ್ರಹಿಸಿ ತಾಳಿಕೋಟಿಯಲ್ಲಿ 3 ದಿನ ಧರಣಿ; ಸೆ.21ಕ್ಕೆ ತಾಳಿಕೋಟಿ ಬಂದ್

ತಾಳಿಕೋಟಿ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ತಾಳಿಕೋಟಿ ಹಾಗೂ ದೇವರಹಿಪ್ಪರಗಿ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸುವಂತೆ ಆಗ್ರಹಿಸಿ ತೀವ್ರ ಹೋರಾಟ ನಡೆಸಲು ಬಿಜೆಪಿ, ಜೆಡಿಎಸ್ ಹಾಗೂ ರೈತ ಮುಖಂಡರ ಪೂರ್ವಭಾವಿ ಸಭೆ ಮಂಗಳವಾರ ಪಟ್ಟಣದ ಎಪಿಎಂಸಿ ಸಭಾಭವನದಲ್ಲಿ ನಡೆಯಿತು.

ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದೇವರಹಿಪ್ಪಗಿ ಶಾಸಕ ರಾಜುಗೌಡ ಪಾಟೀಲ, ಮಾಜಿ ಶಾಸಕ ಸೋಮನಗೌಡ ಪಾಟೀಲ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಹಾಗೂ ರೈತ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

ಸಭೆಯಲ್ಲಿ ಮಾತನಾಡಿದ ಶಾಸಕ

ರಾಜುಗೌಡ ಪಾಟೀಲ, ಹಾಗೂ ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ, ಸೋಮನಗೌಡ ಪಾಟೀಲ ವಿಜಯಪುರ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಬರ ಘೋಷಣೆ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿದರು. ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

Edited By :
PublicNext

PublicNext

15/09/2026 09:44 pm

Cinque Terre

10.1 K

Cinque Terre

0

ಸಂಬಂಧಿತ ಸುದ್ದಿ