ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕ್ರೀಡಾ ಕೇಂದ್ರ ನಿರ್ಮಾಣಕ್ಕೆ ರಾಜ್ಯ ಬಜೆಟ್‌ನಲ್ಲಿ ₹30 ಕೋಟಿ ಪ್ರಸ್ತಾವನೆ

ಪೊನ್ನಂಪೇಟೆ: ಕೊಡಗು ಜಿಲ್ಲೆಯಲ್ಲಿ ಕ್ರೀಡಾ ಪ್ರತಿಭೆಗಳಿಗೆ ಉತ್ತಮ ಅವಕಾಶ ಕಲ್ಪಿಸುವ ಉದ್ದೇಶದಿಂದ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ರಾಜ್ಯ ಸರ್ಕಾರ ಆದ್ಯತೆ ನೀಡಿದೆ ಎಂದು ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ .ಎಸ್. ಪೊನ್ನಣ್ಣ ಹೇಳಿದರು.

ಪೊನ್ನಂಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪೊನ್ನಣ್ಣ, ಕ್ರೀಡಾ ಕೇಂದ್ರ ನಿರ್ಮಾಣಕ್ಕೆ ರಾಜ್ಯ ಬಜೆಟ್‌ನಲ್ಲಿ ₹30 ಕೋಟಿ ಪ್ರಸ್ತಾವನೆ ಸಿದ್ಧವಾಗಿದ್ದು, ಪ್ರಸಕ್ತ ಸಾಲಿನಲ್ಲಿ ₹10 ಕೋಟಿ ಅನುದಾನ ನೀಡುವ ಭರವಸೆ ದೊರೆತಿದೆ. ಮಳೆಗಾಲದ ಹಿನ್ನೆಲೆಯಲ್ಲಿ ಗುದ್ದಲಿಪೂಜೆ ಮುಂದೂಡಿದರೂ ಕಾಮಗಾರಿ ಸ್ಥಗಿತಗೊಳಿಸದೆ ಮುಂದುವರಿಸಲಾಗುತ್ತಿದೆ ಎಂದರು.

ವಿರಾಜಪೇಟೆ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಬಾಸ್ಕೆಟ್‌ಬಾಲ್ ಕೋರ್ಟ್ ನಿರ್ಮಾಣ ಪೂರ್ಣಗೊಂಡಿದ್ದು, ಅದನ್ನು ಒಳಾಂಗಣ ಕ್ರೀಡಾಂಗಣವನ್ನಾಗಿ ಅಭಿವೃದ್ಧಿಪಡಿಸಲು ₹1 ಕೋಟಿಗೂ ಅಧಿಕ ಮೊತ್ತದ ಕಾಮಗಾರಿಗೆ ಟೆಂಡರ್ ಆಗಿದೆ. ಜಿಲ್ಲೆಯ ವಿವಿಧ ಕ್ರೀಡಾ ಯೋಜನೆಗಳಿಗೂ ಅಗತ್ಯ ಅನುದಾನ ಒದಗಿಸಲಾಗುತ್ತಿದೆ ಎಂದು ತಿಳಿಸಿದರು. ಕೊಡಗು ಕ್ರೀಡೆಗೆ ಹೆಸರುವಾಸಿಯಾಗಿದ್ದರೂ ಇತ್ತೀಚೆಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಜಿಲ್ಲೆಯನ್ನು ಪ್ರತಿನಿಧಿಸುವ ಕ್ರೀಡಾಪಟುಗಳ ಕೊರತೆ ಕಂಡುಬರುತ್ತಿದೆ. ಮೂಲಸೌಕರ್ಯ ಹಾಗೂ ವೈಜ್ಞಾನಿಕ ತರಬೇತಿಯ ಕೊರತೆಯನ್ನು ನೀಗಿಸಿ, ಮುಂದಿನ ದಿನಗಳಲ್ಲಿ ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮುವಂತೆ ಮಾಡುವುದು ತಮ್ಮ ಉದ್ದೇಶವಾಗಿದೆ ಎಂದರು.

Edited By : PublicNext Desk
Kshetra Samachara

Kshetra Samachara

16/09/2026 06:57 am

Cinque Terre

240

Cinque Terre

0

ಸಂಬಂಧಿತ ಸುದ್ದಿ