ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಯುವ ಸಂಸತ್ ಅಭಿಯಾನಕ್ಕೆ ಜಿಲ್ಲಾಧಿಕಾರಿ ಸೋಮಶೇಖರ್ ಚಾಲನೆ

ಮಡಿಕೇರಿ: ಇಡೀ ವಿಶ್ವದಲ್ಲಿ ಭಾರತವು ಬೃಹತ್ ಸಂವಿಧಾನ ಹೊಂದಿದ್ದು, ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ ನೀಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಇವರ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ ನಡೆದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಭಾರತ ಸಂವಿಧಾನವು ಮೂಲತಃ 395 ವಿಧಿಗಳನ್ನು ಹೊಂದಿದ್ದು, ಪ್ರಸ್ತುತ 25 ಭಾಗಗಳಲ್ಲಿ ಸುಮಾರು 448 ಕ್ಕೂ ಹೆಚ್ಚು ವಿಧಿಗಳು ಹಾಗೂ 12 ಅನುಸೂಚಿಗಳನ್ನು ಒಳಗೊಂಡು ಬೃಹತ್ ಸಂವಿಧಾನ ಹೊಂದಿದೆ ಎಂದು ಮಾಹಿತಿ ನೀಡಿದರು. ಪ್ರಜಾಪ್ರಭುತ್ವ ಬಗ್ಗೆ ಪ್ರತಿಯೊಬ್ಬರೂ ಅಧ್ಯಯನ ಮಾಡಬೇಕು. ಮೂಲಭೂತ ಹಕ್ಕುಗಳ ಜೊತೆಗೆ ಕರ್ತವ್ಯ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

Edited By : PublicNext Desk
Kshetra Samachara

Kshetra Samachara

16/09/2026 06:59 am

Cinque Terre

300

Cinque Terre

0

ಸಂಬಂಧಿತ ಸುದ್ದಿ